Recent Posts

Wednesday, April 23, 2025
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ : ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!– ಕಹಳೆ ನ್ಯೂಸ್

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರ ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಮುಖವಾಗಿ ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌ ಪುರದಲ್ಲಿ 4 ಸೆಂ.ಮೀ., ಧರ್ಮಸ್ಥಳದಲ್ಲಿ 3 ಸೆಂ.ಮೀ., ಚಿಕ್ಕಮಗಳೂರು ಜಿಲ್ಲೆಯ ಜಯಪುರ, ಮೈಸೂರು ಜಿಲ್ಲೆಯ ಸರಗೂರು, ಹಾವೇರಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಏ.15ರ ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು ಜಿಲ್ಲೆಯ ಕೆಲವೆಡೆ ಇಂದು ಗುಡುಗು ಸಿಡಿಲಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ