
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 1.3 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಹೊಸ ಕಾರಿನ ಫೋಟೋಗಳು ವೈರಲ್ ಆಗ್ತಿವೆ.
‘ಕಾಂತಾರ’ ಸಕ್ಸಸ್ ಬಳಿಕ ರಿಷಬ್‌ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಮನೆಗೆ ದುಬಾರಿ ಕಾರನ್ನು ಖರೀದಿಸಿ ತಂದಿದ್ದಾರೆ. 1.3 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್ ಫೈರ್ ಕಾರನ್ನು ಕೊಂಡುಕೊಂಡಿದ್ದಾರೆ.
ಹೊಸ ಕಾರು ಖರೀದಿಸಿದ ಖುಷಿಯಲ್ಲಿ ಮಡದಿ ಪ್ರಗತಿ ಶೆಟ್ಟಿ ಹಾಗೂ ಮಕ್ಕಳೊಂದಿಗೆ ನಿಂತು ಕಾರಿನ ಮುಂದೆ ರಿಷಬ್ ಪೋಸ್ ಕೊಟ್ಟಿದ್ದಾರೆ.
ಅಂದಹಾಗೆ, ಕಾಂತಾರ ಚಾಪ್ಟರ್ 1, ಜೈ ಹನುಮಾನ್, ಶಿವಾಜಿ ಬಯೋಪಿಕ್ ಸಿನಿಮಾಗಳು ಅವರ ಕೈಯಲ್ಲಿವೆ.