Recent Posts

Wednesday, April 23, 2025
ಬೆಂಗಳೂರುಸುದ್ದಿ

ಮುಡಾ ಕೇಸಲ್ಲಿ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್: ಬಿ-ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕಿಲ್ಲವೆಂದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮುಡಾ ಹಗರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದಂತ ಬಿ-ರಿಪೋರ್ಟ್ ಪ್ರಶ್ನಿಸಿದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದಂತ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಲೋಕಾಯುಕ್ತದಿಂದ ಸಲ್ಲಿಸಿರುವಂತ ಬಿ-ರಿಪೋರ್ಟ್ ಬಗ್ಗೆ ಆದೇಶವನ್ನು ಸದ್ಯಕ್ಕೆ ನೀಡುವುದಿಲ್ಲ.

ತನಿಖೆ ಮುಂದುವರೆಯಲಿ ಎಂಬುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ಮುಡಾ ಕೇಸಲ್ಲಿ ತಾತ್ಕಾಲಿಕ ರಿಲೀಫ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಡಾ ಹಗರಣ ಸಂಬಂಧ ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಾಗಿತ್ತು. ಲೋಕಾಯುಕ್ತದ ಬಿ-ರಿಪೋರ್ಟ್ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ತನ್ನ ಅರ್ಜಿಯ ಪರವಾಗಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ತಾನೇ ವಾದಿಸಿದ್ದರು. ವಾದ-ಪ್ರತಿವಾದವನ್ನು ಆಲಿಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಬಗ್ಗೆ ಆದೇಶ ಸದ್ಯಕ್ಕೆ ಇಲ್ಲ. ತನಿಖೆ ಮುಂದುವರೆಸುವಂತೆ ಸೂಚಿಸಿ ಆದೇಶಿಸಿದ್ದಾರೆ. ಅಲ್ಲದೇ ಿಡಿ ಕೂಡ ತಕರಾರು ಅರ್ಜಿ ಸಲ್ಲಿಸಬಹುದೆಂದು ತೀರ್ಪು ನೀಡಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ