Friday, November 22, 2024
ಸುದ್ದಿ

15ನೇ ವರ್ಷದ ಸಾಹಿತ್ಯ- ಸಾಂಸ್ಕೃತಿಕ ಸಮ್ಮೇಳನ ಆಳ್ವಾಸ್ ನುಡಿಸಿರಿಗೆ ತೆರೆ – ಕಹಳೆ ನ್ಯೂಸ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆದ ಆಳ್ವಾಸ್ ನುಡಿಸಿರಿ-2018ರ ಸಮಾರೋಪ ಸಮಾರಂಭದ ಭಾನುವಾರ ಸಾಯಂಕಾಲ ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ಶ್ರಮಿಸಿದ ಸಾಧಕರನ್ನು ಸನ್ಮಾನಿಸಲಾಯಿತು.
ಕನ್ನಡ ನಾಡು, ನುಡಿಗೆ ಶ್ರಮಿಸಿದ 12 ಮಂದಿ ಸಾಧಕರಾದ ಡಾ.ಜಿ.ಡಿ ಜೋಶಿ ಮುಂಬೈ(ಸಾಹಿತ್ಯ, ಶಿಕ್ಷಣ), ಡಾ.ಎ.ವಿ. ನರಸಿಂಹಮೂರ್ತಿ ಮೈಸೂರು(ಇತಿಹಾಸ ತಜ್ಞ), ಡಾ. ಭಾರತಿ ವಿಷ್ಣುವರ್ಧನ ಬೆಂಗಳೂರು( ಸಿನಿಮಾ), ಡಾ. ಅರುಂಧತಿ ನಾಗ್ (ರಂಗಭೂಮಿ), ಎಲ್.ಬಂದೇನವಾಜ ಖಲೀಫ್ ಆಲ್ದಾಳ ಕಲಬುರಗಿ (ರಂಗ ನಿರ್ದೇಶನ), ಡಾ.ಕೆ. ರಮಾನಂದ ಬನಾರಿ ಕಾಸರಗೋಡು (ಸಾಹಿತ್ಯ), ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ (ಸಾಹಿತ್ಯ, ವಿಮರ್ಶೆ), ಪ್ರೊ. ಎ.ವಿ ನಾವಡ ಮಂಗಳೂರು( ಸಾಹಿತ್ಯ), ಫಾದರ್ ಪ್ರಶಾಂತ್ ಮಾಡ್ತ(ಸಾಹಿತ್ಯ ಸೇವೆ) ಹೊ.ನಾ.ರಾಘವೇಂದ್ರ (ಸುಗಮ ಸಂಗೀತ), ಅರುವ ಕೊರಗಪ್ಪ ಶೆಟ್ಟಿ(ಯಕ್ಷಗಾನ) ಡಾ. ಮೈಸೂರು ನಟರಾಜ, ವಾಷಿಂಗ್‍ಟನ್ (ಸಾಹಿತ್ಯ ಸೇವೆ) ಇವರೆಲ್ಲರಿಗೂ 25,000 ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಸಹಿತ ಆಳ್ವಾಸ್ ನುಡಿಸಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಡಾ. ಚಂದ್ರಶೇಖರ ಕಂಬಾರರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಸಮ್ಮೇಳನಾಧ್ಯಕ್ಷೆ ಡಾ. ಮಲ್ಲಿಕಾ. ಎಸ್. ಘಂಟಿ, ಹಿರಿಯ ಸಂಶೋಧಕ ಡಾ. ಷ. ಶೆಟ್ಟರ್, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉಪಸ್ಥಿತರಿದ್ದರು. ಆಳ್ವಾಸ್ ನುಡಿಸಿರಿ ರೂವಾರಿ ಡಾ. ಎಂ. ಮೋಹನ ಆಳ್ವ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು