Recent Posts

Monday, January 20, 2025
ಸುದ್ದಿ

ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಕಾರಿಯಾಗದೆ ಸಾವು – ಕಹಳೆ ನ್ಯೂಸ್

ಮಂಗಳೂರು: ಪುಂಜಾಲಕಟ್ಟೆ ಕಾಲೇಜಿನಲ್ಲಿ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.

ಕಾವ್ಯಾ (20) ಮೃತ ವಿದ್ಯಾರ್ಥಿನಿ. ಈಕೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ಕಾವ್ಯಾ ಬೆಳ್ತಂಗಡಿ ತಾಲೂಕಿನ ಹುಣ್ಸೇಕಟ್ಟೆ ನಿವಾಸಿಯಾಗಿದ್ದು, ಸಾರ್ವಜನಿಕವಾಗಿ ವ್ಯಕ್ತಿಯೊಬ್ಬನಿಂದ ಅವಮಾನಿತಳಾಗಿದ್ದಳು. ಅವಮಾನ ಮಾಡಿದ್ದ ವ್ಯಕ್ತಿಯನ್ನು ಬಾಬು ಗೌಡ ಎಂದು ಗುರುತಿಸಲಾಗಿದೆ. ಬಳಿಕ ಅವಮಾನದಿಂದ ನೊಂದು ಕಾವ್ಯಾ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಮಾಹಿತಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಬು ಗೌಡ ವಿರುದ್ಧ ಕಾವ್ಯಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಕುರಿತು ಮಂಗಳೂರಿನ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.