
ಬೆಳಗಾವಿ: ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದ ವೇಳೆ ಸಣ್ಣ ಮಕ್ಕಳ ಬೆನ್ನಿಗೆ ಕಾಂಗ್ರೆಸ್ ಸ್ಟಿಕ್ಕರ್ ಅಂಟಿಸಿ ಪ್ರಚಾರ ನಡೆಸಲಾಗಿದೆ.
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಮಿಟಿ ಸಭೆಯ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ವೇಣುಗೋಪಾಲ್ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇಣುಗೋಪಾಲ್ ಮನೆ ಮನೆಗೆ ತೆರಳಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರೆ, ಬೆನ್ನ ಮೇಲೆ ಕಾಂಗ್ರೆಸ್ ಸ್ಟಿಕರ್ ಅಂಟಿಸಿಕೊಂಡಿದ್ದ ಮಕ್ಕಳು ಅವರ ಎದುರುಗಡೆಯೇ ಓಡಾಡುತ್ತಿದ್ದರು.