Recent Posts

Monday, January 20, 2025
ಸುದ್ದಿ

ರಾಮಮಂದಿರ ನಿರ್ಮಾಣ ವಿಚಾರ: ನ. 25 ರಂದು ಜನಾಗ್ರಹ ಸಭೆ – ಕಹಳೆ ನ್ಯೂಸ್

ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸಾಧು ಸಂತರ ನಿರ್ಣಯದಂತೆ ದೇಶದ ಕೆಲ ಭಾಗಗಳಲ್ಲಿ ಬೃಹತ್ ಜನಾಗ್ರಹ ಸಭೆ ನಡೆಸುವುದಾಗಿ ಕೈಗೊಂಡಿದೆ.

ಕೇಂದ್ರ ಸರಕಾರಕ್ಕೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಚಳಿಗಾಲ ಅಧಿವೇಶನದಲ್ಲಿ ಶಾಸನ ರಚಿಸಿ ರಾಮಮಂದಿರ ನಿರ್ಮಾಣ ಮಾಡಲು ಒತ್ತಡ ಹೇರಲು ಈ ಕಾರ್ಯಕ್ರಮವನ್ನು ನವೆಂಬರ್ 25 ರಂದು ದೇಶದ ಕೆಲವು ಭಾಗಗಳಲ್ಲಿ ಹಮ್ಮಿಕೊಂಡಿದ್ದು 25 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ, ಹುಬ್ಬಳ್ಳಿಯಲ್ಲಿ, ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಏಕಕಾಲದಲ್ಲಿ ಹಮ್ಮಿಕೊಳ್ಳಲಿದ್ದು ಇದರ ಪೂರ್ವಭಾವಿ ತಯಾರಿಯ ಬಗ್ಗೆ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶರಣ್ ಪಂಪವೆಲ್ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನವೆಂಬರ್ 25 ರಂದು ಮಂಗಳೂರು ಕೇಂದ್ರ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಐವತ್ತಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ ಎಂದರು. ಅಲ್ಲದೇ ವಿವಿಧ ಹಿಂದೂ ಸಂಘಟನೆಗಳಾದ ಶ್ರೀರಾಮ ಸೇನೆ, ಹಿಂದೂ ಜಾಗರಣ ವೇದಿಕೆ, ಹಿಂದೂ ಯುವಸೇನೆಗಳಂತಹ ಹಿಂದೂ ಸಂಘಟನೆಗಳ ಬೆಂಬಲವು ಇದೇ ಎಂದು ಮಂಗಳೂರಿನಲ್ಲಿ ನಡೆದ ಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು