Friday, September 20, 2024
ಸುದ್ದಿ

ಅಯ್ಯಪ್ಪ ಮಾಲೆ ಧರಿಸಿದ ನಳಿನ್ ಕುಮಾರ್ ಕಟೀಲ್: ಹೋರಾಟ ಸಂಬಂಧಿ ಮಾಹಿತಿಗೆ ಶಬರಿಮಲೆಯಲ್ಲಿ ಅಧ್ಯಯನ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆಯಲ್ಲಿ ಎದುರಾಗಿರುವ ಪ್ರಸ್ತುತ ಸ್ಥಿತಿಗತಿಗಳ ಕುರಿತು ಕೇಂದ್ರಕ್ಕೆ ವರದಿ ನೀಡುವ ಸಲುವಾಗಿ ಅಧ್ಯಯನ ವರದಿ ತಯಾರಿಸಲು ದಕ್ಷಿಣಕನ್ನಡ ಲೋಕಸಭಾ ಸದಸ್ಯ ಹಾಗೂ ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀಲ್ ಶಬರಿಮಲೆಯತ್ತ ಪ್ರಯಾಣಿಸಿ ಸದ್ಯದ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಇವರೊಂದಿಗೆ ರಾಜ್ಯಸಭಾ ಸದಸ್ಯ ವಿ.ಮುರಳೀಧರನ್, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ್ ಕುಮಾರ್ ಬೋಳ್ಯಾರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ಜಗದೀಶ್ ಅಧಿಕಾರಿ ಸಂಸದರಿಗೆ ಸಾಥ್ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ನಡುವೆ ಕೇರಳದ ಬಿಜೆಪಿ ನಾಯಕ ಸುರೇಂದ್ರನ್ ಶಬರಿಮಲೆ ತೆರಳುವ ಸಂದರ್ಭದಲ್ಲಿ ಪೊಲೀಸರು ಬಂಧಿಸಿ ಶಬರಿಮಲೆಗೆ ತೆರಳದಂತೆ ತಡೆಯೊಡ್ಡಿದ್ದರು. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈಗ ಮತ್ತೆ ನಳಿನ್ ಕುಮಾರ್ ಕಟೀಲ್ ಪ್ರಸ್ತುತ ಪರಿಸ್ಥಿತಿ ಕುರಿತು ವರದಿ ತಯಾರಿಸಲು ಶಬರಿಮಲೆಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದು ಕಾದು ನೋಡಬೇಕಿದೆ.

ಪೊಲೀಸ್ ಬಿಗಿ ಬಂದೋಬಸ್ತ್‍ನಲ್ಲಿ ನೂರಾರು ಭಕ್ತರು ದರ್ಶನ ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಶಬರಿಮಲೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸಾವಿರಾರು ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದ್ದಾರೆ.