ಮಂಗಳೂರು: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರಿನ ನಂತೂರು ವೃತ್ತದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ
ಗ್ಯಾಸ್ ಸೋರಿಕೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಡರಾತ್ರಿ ಮೂರು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಈ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ತೆರವು ಕಾರ್ಯಾಚರಣೆ ನಡೆಸಲಾಗ್ತಿದೆ.
ನಂತೂರಿನಿಂದ ಕುಲಶೇಖರಕ್ಕೆ ತೆರಳುವ ದಾರಿಯ ಎರಡೂ ಬದಿಗಳಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಇಲಾಖೆ ಮೊಕ್ಕಾಂ ಹೂಡಿದ್ದು, ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.