ಮಂಗಳೂರು: ಮಂಗಳೂರು ಮತ್ತು ಉಡುಪಿ ಸಹಿತ 129 ಜಿಲ್ಲೆಗಳನ್ನು ಒಳಗೊಂಡಿರುವ ಸಿಟಿ ಗ್ಯಾಸ್ ವಿತರಣೆ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನ.22 ರಂದು ನವದೆಹಲಿಯ ವಿಜ್ಞಾನ ಭವನದಿಂದ ಚಾಲನೆ ನೀಡಲಿದ್ದಾರೆ.
ಈ ಸಂಬಂಧ ಮಂಗಳೂರು ಪುರಭವನದಲ್ಲಿ ನಡೆಯುವ ಸಭಾ ಮತ್ತು ಕಾರ್ಯಕ್ರಮದಲ್ಲಿ ಕೇಂದ್ರ ಮತ್ತು ಪೆಟ್ರೋಲಿಯಮ್ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರದಾನ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಹರ್ಷವರ್ಧನ, ಅಂಕಿಅಂಶ ಮತ್ತು ಅನುಷ್ಟಾನ ಸಚಿವ ಡಿ.ವಿ.ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್, ಭಾಗವಹಿಸಲಿದ್ದಾರೆ.
ಉಡುಪಿ ಬೀಡಿನಗುಡ್ಡೆ ಬಯಲು ರಂಗಮಮದಿರದಲ್ಲಿ ಮಧ್ಯಾಹ್ನ 2.30ಕ್ಕೆ ಕಾರ್ಯಕ್ರವiದ ನೇರಪ್ರಸಾರ ಇರಲಿದೆ. ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಜಿಲ್ಲೆಯ ಎಲ್ಲ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ.