ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ಸಂಸ್ಥೆಯಲ್ಲಿ ಅಭ್ಯಾಸ ನಡೆಸುತ್ತಿರುವ 2 ನೆ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇನ್ನೂ ಪಠ್ಯ ಚಟುವಟಿಕೆಗಳು ಆರಂಭವಾಗಿರುವುದಿಲ್ಲ.
ಈ ವಿದ್ಯಾರ್ಥಿಗಳಿಗೆ ಮೊದಲ ವರ್ಷದ ತರಗತಿಗಳನ್ನು ಒಪ್ಪಂದದ ಮೇರೆಗೆ ಪ್ಯಾರಾ ಮೆಡಿಕಲ್ ಸೈನ್ಸ್ ಆಫ್ ಮಂಗಳ ಕಾಲೇಜಿನಲ್ಲಿ ನಡೆಸಲಾಗಿತ್ತು.
ಇದೇ ಕೋರ್ಸಿಗೆ ಸಂಬಂಧಪಟ್ಟ ಇತರ ಕಾಲೇಜುಗಳಲ್ಲಿ ಪಠ್ಯ ಚಟುವಟಿಕೆಗಳು ಆರಂಭವಾಗಿ ಆಂತರಿಕ ಪರೀಕ್ಷೆಗಳು ಮುಗಿದಿದ್ದರೂ ವೆನ್ಲಾಕ್ ಆಸ್ಪತ್ರೆಯ ಪ್ಯಾರಾ ಮೆಡಿಕಲ್ ಬಡ ಹಿನ್ನೆಲೆಯಲ್ಲಿ ಬಂದಿರುವ ವಿದ್ಯಾರ್ಥಿಗಳು ಇನ್ನೂ ಪಠ್ಯ ಚಟುವಟಿಕೆಗಳು ಆರಂಭವಾಗದೆ ಕಂಗಾಲಾಗಿದ್ದಾರೆ.
ಇದರ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‌ಎಫ್‌ಐ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಂಡು ತಮ್ಮ ಆಕ್ರೋಶವನ್ನು ವ್ಯಕ್ತ ಪಡಿಸಿದ.