ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗನ ನಡುವೆ ಜಗಳ ಏರ್ಪಟ್ಟು. ಅಪ್ಪ, ಮಗ ಇಬ್ಬರೂ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ, ಹಂತುವಾನಿ ಗ್ರಾಮದಲ್ಲಿ ನಡೆದಿದೆ.
ಮಗ ಅಭಿ ಮತ್ತು ತಂದೆ ತಿಮ್ಮಣ್ಣ ಮೃತ ದುರ್ದೈವಿಗಳು, ಮಗ ಕೆರೆಗೆ ಬಿದ್ದು ಸಾವನ್ನಪ್ಪಿದ ಸುದ್ದಿ ತಿಳಿದು ಅಪ್ಪನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬದ ಇಬ್ಬರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.