Saturday, November 23, 2024
ಸುದ್ದಿ

ಗ್ಯಾಸ್ ಸಿಲಿಂಡರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ಗೃಹಿಣಿ ಸಾವು – ಕಹಳೆ ನ್ಯೂಸ್

ಕೆ.ಆರ್.ಪೇಟೆ: ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದ ಬಳಿ ಇರುವ ಕ್ರಿಶ್ಚಿಯನ್ ಕಾಲೋನಿಯಲ್ಲಿರುವ ಮನೆಯಲ್ಲಿ ಮಂಗಳವಾರ ರಾತ್ರಿ ಆಂಥೋನಿಯಮ್ಮ ಅವರು ಅಡುಗೆ ಮಾಡುವಾಗ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗೃಹಿಣಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಟ್ಟಣದ ಕ್ರಿಶ್ಚಿಯನ್ ಕಾಲೋನಿಯ ಆಂಥೋನಿಯಮ್ಮ(50) ಸಿಲಿಂಡರ್ ಸ್ಪೋಟದಿಂದ ಮೃತಪಟ್ಟ ಗೃಹಿಣಿ. ಆಕಸ್ಮಿಕ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಶೇ.80ರಷ್ಟು ಮೈಮೇಲೆ ಸುಟ್ಟ ಗಾಯಗಳಾಗಿ ಅಸ್ವಸ್ಥಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ಮೃತರ ಪುತ್ರ ಪೀಟರ್ ಪಟ್ಟಣ ಪೊಲೀಸರಿಗೆ ನೀಡಿದರುವ ದೂರಿನಲ್ಲಿ ತಿಳಿಸಿದ್ದಾರೆ. ಮೃತರ ನಿಧನಕ್ಕೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು