Saturday, September 21, 2024
ಸುದ್ದಿ

ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ: ಕರ್ನಾಟಕದ 7 ಜಿಲ್ಲೆ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು: ನವದೆಹಲಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಸಭೆಯಲ್ಲಿ ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಮಾಡುವ ಯೋಜನೆಗೆ ಕರ್ನಾಟಕದ 7 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. 7.34 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ.

ಶೀಘ್ರದಲ್ಲೇ ಈ ಯೋಜನೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಇದೇ ಯೋಜನೆಯನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಜಾಹೀರಾತು

ರಾಮನಗರ, ಚಿತ್ರದುರ್ಗ, ಉಡುಪಿ, ಬಳ್ಳಾರಿ, ಗದಗ, ಬೀದರ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 7.34 ಲಕ್ಷ ಮನೆಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ.