Recent Posts

Sunday, January 19, 2025
ಸುದ್ದಿ

ಅಂಬೇಡ್ಕರ್ ಸಹಾಯಾಸ್ತದಡಿ ಜಾರಿಗೊಳಿಸಿದ ಸ್ಮಾರ್ಟ್ ಕಾರ್ಡ್ ಯೋಜನೆ ಇದೂವರೆಗೂ ಅನುಷ್ಠಾನಗೊಳಿಸಿಲ್ಲ: ಸುರೇಶ್ ಕುಲಾಲ್ – ಕಹಳೆ ನ್ಯೂಸ್

ಬಂಟ್ವಾಳ: ರಾಜ್ಯದ ದರ್ಜಿಗಳಿಗೆ ಅಂದಿನ ಸಿದ್ದರಾಮಯ್ಯ ನೇತೃತ್ವದದ ರಾಜ್ಯ ಸರಕಾರವು ಅಂಬೇಡ್ಕರ್ ಸಹಾಯಾಸ್ತದಡಿ ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದೂವರೆಗೂ ಅನುಷ್ಠಾನಗೊಳಿಸಿಲ್ಲ ಎಂದು ಕರ್ನಾಟಕ ರಾಜ್ಯ ಟೈಲರ್ ಅಸೋಶೀಯೇಶನ್ ರಾಜ್ಯ ಉಪಾಧ್ಯಕ್ಷ ಸುರೇಶ್ ಕುಲಾಲ್ ಆರೋಪಿಸಿದ್ದಾರೆ.

ಗುರುವಾರ ಸಂಜೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಹೊಲಿಗೆ ವೃತ್ತಿಯವರಿಗೆ ಯಾವುದೇ ರೀತಿಯ ಭದ್ರತೆ ಇರುವುದಿಲ್ಲ. ಅದಲ್ಲದೆ, ಉದ್ಯೋಗ ಖಾತ್ರಿಯಿಲ್ಲದೆ ಹಾಗೂ ವೃದ್ಧಾಪ್ಯ ಬದುಕಿನಲ್ಲಿ ಭದ್ರತೆಯಿಲ್ಲದೆ ತೀರಾ ಅಸಹಾಯಕ ಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ದರ್ಜಿಗಳು ಅನುಭವಿಸುತ್ತಿರುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ.25 ರಂದು ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಈಶ್ವರ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಲಯನ್ಸ್ ಕ್ಲಬ್‌ನಲ್ಲಿ ಸಂಘದ ಮಹಾಸಭೆಯನ್ನು ಏರ್ಪಡಿಸಲಾಗಿದೆ.

ಶಾಸಕ ರಾಜೇಶ್ ನಾಯ್ಕ್ ಅವರು ಸಭೆಯನ್ನು ಉದ್ಘಾಟಿಸುವರು. ಸಂಘದ ರಾಜ್ಯಾಧ್ಯಕ್ಷ ಕೆ.ಎಸ್. ಆನಂದ, ತಹಶೀಲ್ದಾರ್ ಪುರಂದರ ಹೆಗ್ಡೆ, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಸಂತ, ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಭೆಯ ಬಳಿಕ ರಾಜ್ಯ ದರ್ಜಿಗಳ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಶಾಸಕರ ಮೂಲಕ ರಾಜ್ಯ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಈಶ್ವರ ಕುಲಾಲ್, ಕೋಶಾಧಿಕಾರಿ ಯಾದೇಶ್, ಪ್ರಧಾನ ಕಾರ್ಯದರ್ಶಿ ನಾಗೇಶ್, ಸತೀಶ್, ಸುರೇಶ್ ಉಪಸ್ಥಿತರಿದ್ದರು.