ಚಿಕ್ಕಮಗಳೂರು: ಮಲೆನಾಡು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನವಳ್ಳಿಯಲ್ಲಿ ನಡೆಯುವ ಉಣ್ಣಕ್ಕಿ ಜಾತ್ರೆ ಈ ಬಾರಿಯೂ ಅದ್ದೂರಿಯಾಗಿ ನಡೆಯಿತು. ಹೊಯ್ಸಳರ ಕಾಲದಿಂದಲೂ ನಡೆದು ಬರ್ತಿರೋ ಆಚರಣೆಗೆ 400 ವರ್ಷಗಳ ಇತಿಹಾಸವಿದೆ.
ಪ್ರತಿ ವರ್ಷ ದೀಪಾವಳಿ ಅಮಾವಸ್ಯೆಯ ನಂತರದ ಮಕ್ಕಳ ಹುಣ್ಣೆಮೆಯಂದು ನಡೆಯೋ ಉತ್ಸವದಲ್ಲಿ ಮಹಾಮಂಗಳಾರತಿ ವೇಳೆ ಇಲ್ಲಿರೋ ಹುತ್ತ 10 ರಿಂದ 15 ಡಿಗ್ರಿ ಅಂತರದಲ್ಲಿ ಅಲುಗಾಡುತ್ತೆ.
ಈ ಹುತ್ತ ಬರೀ ಮಣ್ಣಿನ ಗೂಡಲ್ಲ. ದೈವಿಶಕ್ತಿ ಇರೋ ಹುತ್ತ. 400 ವರ್ಷಗಳ ಹಿಂದೆ, ಚಿಕ್ಕದ್ದಿದ್ದ ಗೂಡು ಇಂದು 12 ಅಡಿಗೂ ಎತ್ತರ ಬೆಳೆದಿದ್ದು ಯಾವುದೇ ಸೂರಿಲ್ಲ.
ಆದ್ರೂ ಮಳೆ-ಗಾಳಿಗೆ ಒಂದಿಂಚು ಕರಗಿಲ್ಲ. ವರ್ಷಪೂರ್ತಿ ಮಣ್ಣಿನ ಗೂಡಿನಂತೆ ನಿಂತ ಈ ಹುತ್ತ ವರ್ಷಕ್ಕೊಮ್ಮೆ ಭಕ್ತರು ಆಶ್ಚರ್ಯ ಪುಳಕಿತರಾಗುವಂತೆ ಅಲುಗಾಡುತ್ತೆ. ಇಲ್ಲಿನ ವಿಸ್ಮಯದಿಂದ ಪ್ರತಿ ವರ್ಷ ಭಕ್ತರ ಸಂಖ್ಯೆ ಕೂಡ ಏರಿಕೆಯಾಗ್ತಿದ್ದು ಈ ಭಾರಿಯೂ ಜಾತ್ರೆ ಅದ್ದೂರಿಯಾಗಿ ನಡೆಯಿತು.