Recent Posts

Sunday, January 19, 2025
ಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವು ಕೂಡಲೇ ಸುಗ್ರಿವಾಜ್ಞೆ ಹೊರಡಿಸಬೇಕು: ಹಿಂದೂ ಜನಜಾಗೃತಿ ಸಮಿತಿ – ಕಹಳೆ ನ್ಯೂಸ್

ಮಂಗಳೂರು: ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ಮಂಗಳೂರಿನ ಕೇಂದ್ರ ಮೈದಾನದಲ್ಲಿ ವಿಹಿಂಪ ಆಯೋಜಿಸಿದ್ದ ಜನಾಗ್ರಹ ಸಭೆ ಅತ್ಯಂತ ಮಹತ್ವದ್ದಾಗಿದೆ. ಪ್ರಭು ಶ್ರೀರಾಮನು ಕೋಟಿಗಟ್ಟಲೆ ಹಿಂದೂಗಳ ಶ್ರದ್ಧಾಸ್ಥಾನವಾಗಿದ್ದಾರೆ. ಹಾಗಾಗಿ ಈ ಬಗ್ಗೆ ಹಿಂದೂ ಸಮಾಜವು ತಾಳ್ಮೆ ಕಳೆದುಕೊಳ್ಳುವ ಮುನ್ನವೇ ರಾಮಮಂದಿರ ನಿರ್ಮಾಣವಾಗಬೇಕು.

ಅದಕ್ಕಾಗಿ ಎಲ್ಲ ಹಿಂದೂಗಳು ಈಗ ಆಕ್ರೋಶಗೊಂಡಿದ್ದಾರೆ. ವಿಹಿಂಪ ಆಯೋಜಿಸುತ್ತಿರುವ ಈ ಸಭೆಗೆ ಹಿಂದೂ ಜನಜಾಗೃತಿ ಸಮಿತಿಯ ಪೂರ್ಣ ಬೆಂಬಲ ಇದೆ. ಸಮಿತಿಯು ಈ ಮೊದಲೂ ರಾಷ್ಟ್ರೀಯ ಅಧಿವೇಶನದಲ್ಲಿ ಶ್ರೀರಾಮ ಮಂದಿರ ನಿರ್ಮಿತಿಗಾಗಿ ಪ್ರಸ್ತಾಪವನ್ನು ಅಂಗೀಕರಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಟಿಗಟ್ಟಲೆ ಹಿಂದೂಗಳ ಶ್ರದ್ಧಾಸ್ಥಾನವಾಗಿರುವ ಭವ್ಯ ರಾಮಮಂದಿರ ನಿರ್ಮಿತಿಗಾಗಿ ಕೇಂದ್ರ ಸರಕಾರವು ಕೂಡಲೇ ಸುಗ್ರೀವಾಜ್ಞೆ ಹೊರಡಿಸಲಿ, ಎಂದು ನಾವು ಆಗ್ರಹಿಸುತ್ತಿದ್ದೇವೆ.

ಜಾಹೀರಾತು
ಜಾಹೀರಾತು
ಜಾಹೀರಾತು