Recent Posts

Sunday, January 19, 2025
ಸುದ್ದಿ

ಮಂಡ್ಯದ ಗಂಡು ಅಂಬಿ ನಿಧನಕ್ಕೆ ಗಣ್ಯರ ಸಂತಾಪ ; ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ – ಕಹಳೆ ನ್ಯೂಸ್

ಬೆಂಗಳೂರು, [ನ.25]: ಮಂಡ್ಯದ ಗಂಡು ಅಂಬರೀಶ್ ನಿನ್ನೆ [ಶನಿವಾರ] ಹೃದಯಾಘಾತದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 

ಸ್ಯಾಂಡಲ್​ವುಡ್​ನ ಜಲೀಲನ ನಿಧನಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ, ದರ್ಶನ್, ಶಾಸಕ ಸುರೇಶ್ ಕುಮಾರ್ ಸೇರಿದಂತೆ ಸಿನಿಮಾ ರಂಗದ ನಟ-ನಟಿಯರು ಹಾಗೂ ರಾಜಕೀಯ ಮುಖಂಡರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ.   ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು