Sunday, January 19, 2025
ಸುದ್ದಿ

72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ; ಪಿ.ಜಿ.ಆರ್ ಸಿಂದ್ಯಾರಿಗೆ ಸನ್ಮಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕೆ.ಎಸ್.ಎಸ್.ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಇದರ 72 ನೇ ಹಿಮಾಲಯನ್ ವುಡ್ ಬ್ಯಾಡ್ಜ್ ಶಿಕ್ಷಕರ ಸಮಾವೇಶ – ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಸಮಾವೇಶವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾಜಿ ಸಚಿವ ಹಾಗೂ ರಾಜ್ಯ ಸ್ಕೌಟ್ & ಗೈಡ್ ಸಂಸ್ಥೆಯ ಆಯುಕ್ತ ಪಿ.ಜಿ.ಆರ್ ಸಿಂದ್ಯಾ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಜೀವನದಲ್ಲಿ ಎಲ್ಲವೂ ಆಕಸ್ಮಿಕ ನಾವು ಬಯಸಿದ ಹಾಗೆ ಎಲ್ಲವೂ ಧಕ್ಕುವುದಿಲ್ಲ ಎಂದು ಹೇಳಿದರು.
ಈ ಸಂದರ್ಭ ಕೆ.ಎಸ್. ಎಸ್.ಕಾಲೇಜಿನ ಪ್ರಾಂಶುಪಾಲ ರಂಗಯ್ಯ ಶೆಟ್ಟಿಗಾರ್, ತಾ.ಪಂ ಸದಸ್ಯ ಅಶೋಕ್ ನೆಕ್ರಾಜೆ, ರಾಜ್ಯ ಗೈಡ್ಸ್ ಆಯುಕ್ತೆ ಗೀತಾ ನಟರಾಜ್, ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು