ಅಂಬರೀಶ್ ಸಾವಿನ ಕುರಿತು ಉಡುಪಿ ಕಾಪುವಿನ ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಫೇಸ್ ಬುಕ್ ಪೇಜ್ – ಕಹಳೆ ನ್ಯೂಸ್
ಉಡುಪಿ: ಉಡುಪಿಯ ಕಾಪುವಿನ ಖ್ಯಾತ ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ನಟ ಅಂಬರೀಶ್ ಸಾವಿನ ಕುರಿತು ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.
ದೊಡ್ಡಣ್ಣ ಅವರ ಮೂಲಕ ನನಗೆ ಅಂಬರೀಶ್ ಅವರ ಪರಿಚಯ ಆಯ್ತು. ಅವರ ಜಾತಕ ನೋಡಿ , ಲಗ್ನಾಷ್ಟಮದಲ್ಲಿ ಶನಿಸಂಚಾರ ಕಾಲ, ದಶಾಧಿಪತಿ ಬುಧನಿಗೆ ಚತುರ್ಥದಲ್ಲಿ ಕೇತು ಇರುವುದು ಅಪಾಯ ಎಂದು ತಿಳಿದು ಅವರಿಗೆ ಮೃತ್ಯುಂಜಯ ಹೋಮ ಮತ್ತು ಆಶ್ಲೇಷಾಬಲಿ ಮಾಡಲು ಸೂಚಿಸಿದ್ದೆ.
ಆ ಪ್ರಕಾರ ಹನ್ನೆರಡನೆಯ ತಾರೀಕು ನನ್ನ ಮೂಲಕವೇ ಮಾಡುವುದೆಂದೂ ದಿನ ನಿಗದಿಯೂ ಆಯ್ತು. ಆದರೆ ಆ ದಿನ ಬೆಂಗಳೂರಲ್ಲಿ ನನಗೆ ಜ್ವರ ಬಂದು ಆರೋಗ್ಯವೂ ಕೈ ಕೊಟ್ಟಿತು.ಆದರೂ ಮಾಡೇ ಬಿಡೋಣ ಅಂತ ನನ್ನ ಜತೆ ಬಂದಿದ್ದ ಪುರೋಹಿತರು ಹೇಳಿಯೂ ಇದ್ದರು. ಆದರೆ ಮಾನ್ಯ ಅನಂತಕುಮಾರ್ ಅವರ ಅಂತ್ಯಕ್ರಿಯೆಯ ಕಾರಣ ಮುಂದಿನ ಸಲ ಮಾಡೋಣ ಎಂದು ಅಂಬರೀಷ್ ಹೇಳಿದರು. ನಾನೂ ಸುಮ್ಮನಾದೆ.
ಈ ನಂತರ ಯಾವಾಗ ಮಾಡೋಣ ಎಂದು ಮತ್ತೆ ಕೇಳಿದ್ದರು.ನಾನು ಇನ್ನೂ ಡೇಟ್ ಕೊಡದೆ ಮುಂದೆ ಹಾಕಿದ್ದೆ. ಈಗ ನಮ್ಮ ನೆಚ್ಚಿನ ಅಂಬರೀಷ್ ಇನ್ನಿಲ್ಲ. ಇದನ್ನೇ ದೈವ ಚಿತ್ತ ಎನ್ನುವುದು. ನಾನೇನೂ ಜೀವ ಉಳಿಸುವವನಲ್ಲ. ಆದರೆ ಭಕ್ತಿಶ್ರದ್ಧೆಯಿಂದ ಮಾಡುವ ಆ ಹೋಮ ಪೂಜೆಗಳಿಗೆ ಆ ಶಕ್ತಿ ಇತ್ತು ಎಂದು ಬರೆದುಕೊಂಡಿದ್ದಾರೆ.ಈ ಪೋಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದುಮಾಡುತ್ತಿದೆ.
ಜ್ಯೋತಿಷಿ ಅಮ್ಮಣ್ಣಾಯ ಅವರ ಪೋಸ್ಟ್ ನ ಪೂರ್ಣ ಬರಹ:
ಇದಕ್ಕೇ ಹೇಳುವುದು ನಾವು ನಿಮಿತ್ತ ಮಾತ್ರ ಎಂದು. ಅಕ್ಟೋಬರ್ ಹತ್ತನೆಯ ತಾರೀಕು ಅಂಬರೀಶ್ ಅವರೊಡನೆ ಪ್ರಥಮ ಬಾರಿ ಫೋನಿನಲ್ಲಿ ಸಂಭಾಷಣೆ ಮಾಡಿದ್ದೆ. ದೊಡ್ಡಣ್ಣರವರ ಮೂಲಕ ಪರಿಚಯವಾಯ್ತು. ಜಾತಕ ನೋಡಿ ,ಲಗ್ನಾಷ್ಟಮದಲ್ಲಿ ಶನಿಸಂಚಾರ ಕಾಲ,ದಶಾಧಿಪತಿ ಬುಧನಿಗೆ ಚತುರ್ಥದಲ್ಲಿ ಕೇತು ಇರುವುದು ಅಪಾಯ ಎಂದು ತಿಳಿದು ಅವರಿಗೆ ಮೃತ್ಯುಂಜಯ ಹೋಮ ಮತ್ತು ಆಶ್ಲೇಷಾಬಲಿ ಮಾಡಲು ಸೂಚಿಸಿದ್ದೆ.
ಆ ಪ್ರಕಾರ ಹನ್ನೆರಡನೆಯ ತಾರೀಕು ನನ್ನ ಮೂಲಕವೇ ಮಾಡುವುದೆಂದೂ ದಿನ ನಿಗದಿಯೂ ಆಯ್ತು. ಆದರೆ ಆದಿನ ಬೆಂಗಳೂರಲ್ಲಿ ನನಗೆ ಜ್ವರ ಬಂದು ಆರೋಗ್ಯವೂ ಕೈ ಕೊಟ್ಟಿತು.ಆದರೂ ಮಾಡೇ ಬಿಡೋಣ ಅಂತ ನನ್ನ ಜತೆ ಬಂದಿದ್ದ ಪುರೋಹಿತರು ಹೇಳಿಯೂ ಇದ್ದರು.ಆದರೆ ಮಾನ್ಯ ಅನಂತಕುಮಾರ್ ಅವರ ಅಂತ್ಯಕ್ರಿಯೆಯ ಕಾರಣ ಮುಂದಿನ ಸಲ ಮಾಡೋಣ ಎಂದು ಅಂಬರೀಷ್ ಹೇಳಿದರು.
ನಾನೂ ಇದೂ ಹೌದು ಎಂದು ಸುಮ್ಮನಾದೆ. ಈ ನಂತರ ಯಾವಾಗ ಮಾಡೋಣ ಎಂದು ಮತ್ತೆ ಕೇಳಿದ್ದರು.ನಾನು ಇನ್ನೂ date ಕೊಡದೆ ಮುಂದೆ ಹಾಕಿದ್ದೆ. ಈಗ ನಮ್ಮ ನೆಚ್ಚಿನ ಅಂಬರೀಷ್ ಇನ್ನಿಲ್ಲ. ಇದನ್ನೇ ದೈವ ಚಿತ್ತ ಎನ್ನುವುದು.ನಾನೇನೂ ಜೀವ ಉಳಿಸುವವನಲ್ಲ. ಆದರೆ ಭಕ್ತಿಶ್ರದ್ಧೆಯಿಂದ ಮಾಡುವ ಆ ಹೋಮ ಪೂಜೆಗಳಿಗೆ ಆ ಶಕ್ತಿ ಇತ್ತು.ಹಾಗಾಗಿ ಆಯುಷ್ಯ ಮುಗಿದಿದ್ದಾಗ ಪೂಜೆ ಮಾಡುವ ಯೋಗ ಬರಲಿಲ್ಲ.
ಅಂತೂ ಸಜ್ಜನರೊಬ್ಬರನ್ನು ಕಳೆದುಕೊಂಡ ದುಃಖವು ನನಗಿದೆ.ಹಾಗಾಗಿ ಇದನ್ನು ಬರೆಯಬೇಕೆಂದೆನಿಸಿತು.ಸಜ್ಜನರನ್ನು ಉಳಿಸಿಕೊಳ್ಳುವ ಯೋಗಭಾಗ್ಯವು ನಮಗೂ ಬೇಕು.ಅದು ಇಲ್ಲದಂತಾಯ್ತು. ಅವರ ದಿವ್ಯಾತ್ಮಕ್ಕೆ ಅಕ್ಷಯ ಪುಣ್ಯಲೋಕ ಸಿಗಲಿ ಎಂದು ದೇವರಲ್ಲಿ ನನ್ನ ಪ್ರಾರ್ಥನೆ.