Recent Posts

Sunday, January 19, 2025
ಸುದ್ದಿ

ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ನೂತನ ಅಣಕು ನ್ಯಾಯಾಲಯ ಕಟ್ಟಡದ ಉದ್ಘಾಟನೆ, ಸಂವಿಧಾನ ದಿನಾಚರಣೆ ಮತ್ತು ಬೆನಗಲ್ ನರಸಿಂಗ ರಾವ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮವು ದಿನಾಂಕ 26-11-2018 ರಂದು ಕಾನೂನು ಕಾಲೇಜಿನಲ್ಲಿ ನಡಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಅಶೋಕ್ ಹಿಂಚ್‌ಗಿರಿ ಮಾತನಾಡಿ, ಸಂವಿಧಾನ ದಿನವನ್ನು ಆಚರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯವಾಗಿದ್ದು, ಯಾಕೆಂದರೆ ಭಾರತದ ಸಂವಿಧಾನವು ಅತೀ ಹೆಚ್ಚಿನ ವಿವಿಧತೆಯನ್ನು ಹೊಂದಿರುವ ಜನರನ್ನು ನಿರ್ವಹಿಸುವ ಅತೀ ಶ್ರೇಷ್ಠ ಸಂವಿಧಾನವಾಗಿದೆ. ಈ ಒಂದು ಸಂದರ್ಭದಲ್ಲಿ ಯುವಜನತೆ, ಕಾನೂನು ವಿಭಾಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂಬುದನ್ನು ಗಮನಿಸುವಾಗ ಸಂತಸವಾಗುತ್ತದೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಮಾತು ಮಂದುವರಿಸಿ, ಬೆನಗಲ್ ನರಸಿಂಗ್ ರಾವ್ ಅವರು ಸಂವಿಧಾನ ನಿರ್ಮಾಣ ಕಾರ್ಯದಲ್ಲಿ ತಮ್ಮ ಮಹತ್ವಪೂರ್ಣ ಸೇವೆಯನ್ನು ನೀಡಿದ್ದು, ಅವರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ಸ್ಮರಣೀಯ ಕಾರ್ಯ ಎಂದು ಹೇಳಿ ಬೆನಗಲ್ ನರಸಿಂಗ್ ರಾವ್ ಅವರು ಸಂವಿಧಾನಕ್ಕೆ ನೀಡಿರುವ ಕೊಡುಗೆಗಳ ಕುರಿತು ವಿವರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ನಿವೃತ್ತ ಕುಲಸಚಿವರಾದ ಪ್ರೊ. ವಿ. ಎಸ್. ಮಲ್ಲಾರ್ ಸಂವಿಧಾನ ದಿನದ ಮಹತ್ವ ಮತ್ತು ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಕಾನೂನು ವಿಚಾರಗಳ ಕುರಿತು ಚರ್ಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯರಲ್ಲಿ ರಕ್ತಗತವಾಗಿದ್ದು, ಆದ್ದರಿಂದ ಭಾರತೀಯ ಸಂವಿಧಾನವು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಬೆನಗಲ್ ನರಸಿಂಗ್ ರಾವ್ ಅವರಂತಹ ವ್ಯಕ್ತಿಗಳನ್ನು ನೆನಪಿಸಿಕೊಳ್ಳುವುದು ಒಳ್ಳೆಯ ವಿಚಾರ ಎಂದು ಹೇಳಿದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಣೇಶ್ ಜೋಷಿ ಬಿ., ಮತ್ತು ಸಂಚಾಲಕರಾದ ಶ್ರೀ ವಿಜಯನಾರಾಯಣ ಕೆ. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವಿಂದ್ರ ಸ್ವಾಗತಿಸಿ, ಪ್ರಾಂಶುಪಾಲರಾದ ಶ್ರಿ ರಾಜೆಂದ್ರ ಪ್ರಸಾದ್ ಎ ವಂದಿಸಿದರು.