Recent Posts

Sunday, January 19, 2025
ಸುದ್ದಿ

ಜನಾರ್ದ‌ನ ಪೂಜಾರಿ ಅನಾರೋಗ್ಯದ ಬಗ್ಗೆ ಸುಳ್ಳು ಸಂದೇಶ ಹರಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅಗ್ರಹ – ಕಹಳೆ ನ್ಯೂಸ್

ಬಂಟ್ವಾಳ: ಹಿರಿಯ ಕಾಂಗ್ರೇಸ್ ನಾಯಕ ಮಾಜಿ ಮಂತ್ರಿ ಜನಾರ್ದನ ಪೂಜಾರಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವನ ಮೇಲೆ ಕಾನೂನು ಕ್ರಮಕೈಗೊಳ್ಳಲು ಹರಿಕ್ರಷ್ಣ ಬಂಟ್ವಾಳ ಬಂಟ್ವಾಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

ಜನಾರ್ದ‌ನ ಪೂಜಾರಿ ಅನಾರೋಗ್ಯದ ಬಗ್ಗೆ ಸುಳ್ಳು ಸಂದೇಶ ರವಾನೆ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ದ.ಕ.ಜಿಲ್ಲಾ ಬಿಜೆಪಿ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ‌

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿಘ್ನ ಸಂತೋಷಿಗಳಿಂದ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಜನಾರ್ದನ ಪೂಜಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸುಳ್ಳು ಮಾಹಿತಿ ರವಾನೆಯಾಗುತ್ತಿದ್ದು ಇದು ಅಪರಾಧ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಸುಳ್ಳು ಸಂದೇಶ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಈ ಮೂಲಕ ಅಗ್ರಹ ಪಡಿಸಿದ್ದಾರೆ.

ಜನಾರ್ದನ ಪೂಜಾರಿಯವರು ಆರೋಗ್ಯವಂತರಾಗಿದ್ದಾರೆ. ಬಂಟ್ವಾಳದ ಸ್ವಗೃಹದಲ್ಲಿ ಕುಟುಂಬಿಕರ ಜೊತೆ ಸಂತೋಷದಿಂದ ಇದ್ದಾರೆ ಎಂದು ಅವರು ತಿಳಿಸಿದ್ದಾರೆ.