Monday, January 20, 2025
ಸುದ್ದಿ

ಯೋಜನೆ ಮತ್ತು ಯೋಚನೆಗಳು ಸರಿಯಾದ ಮಾರ್ಗವನ್ನು ಅನುಸರಿಸಿದಾಗ ಮಾತ್ರ ಯಶಸ್ಸು ಸಾಧ್ಯ: ಚಂದ್ರಹಾಸ ಕರ್ಕೇರ – ಕಹಳೆ ನ್ಯೂಸ್

ಬಂಟ್ವಾಳ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಸಿಡಾಕ್ ಸಂಸ್ಥೆ ಯ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ “ದಿಶಾ” ಐಇಸಿ, ಔಟ್ ರೀಚ್ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷ ತೆ ವಹಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಯೋಜನೆ ಮತ್ತು ಯೋಚನೆಗಳು ಸರಿಯಾದ ಮಾರ್ಗವನ್ನು ಅನುಸರಿಸಿಕೊಂಡು ಹೋದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ.
ಸರಕಾರ ಅನೇಕ ಯೋಜನೆಗಳನ್ನು ಸ್ವ ಉದ್ಯೋಗದ ಮೂಲಕ ಜನರಿಗೆ ನೀಡಿದೆಯಾದರೂ  ಕೂಲಂಕಷವಾಗಿ ಅಧ್ಯಯನ ಮಾಡಲು ಅವಕಾಶ ಇಲ್ಲದೆ ನೆನೆಗುದಿಗೆ ಬಿದ್ದಿದೆ. ಇಂತಹ ತರಬೇತಿಯ ಮೂಲಕ ಸರಕಾರದ ಯೋಜನೆಗಳು ಸಮರ್ಪಕವಾಗಿ ಬಳಕೆಯಾಗಲು ಸಾಧ್ಯ ಎಂದರು.
ಮುಖ್ಯ ಅತಿಥಿಯಾಗಿ ಮಾತನಾಡಿ ದ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಸ್ವಸಹಾಯ ಗುಂಪಿನ ಮೂಲಕ ಅರ್ಥಿಕ ವ್ಯವಸ್ಥೆ , ಭದ್ರತೆ ಒದಗಿಸುವ ನಿಟ್ಟಿನಲ್ಲಿ ಸರಕಾರ ಉತ್ತಮ ಯೋಜನೆಗಳನ್ನು ಜಾರಿ ಮಾಡಿದೆ. ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು. ಸ್ಥಾಯಿ ಸಮಿತಿ ಅಧ್ಯಕ್ಷೆ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವೇದಿಕೆಯಲ್ಲಿ ತಾ.ಪಂ.ಇಒ ರಾಜಣ್ಣ, ಸಹಾಯಕ ಯೋಜನಾಧಿಕಾರಿ ದಯಾವತಿ,  ಕಾರ್ಯಕ್ರಮದ ಜಿಲ್ಲಾ ವ್ಯವಸ್ಥಾಪಕ ಹರಿಪ್ರಸಾದ್  ಸಿಡಾಕ್ ಸಂಸ್ಥೆ ಸಂಪನ್ಮೂಲ ವ್ಯಕ್ತಿಗಳಾದ  ಸತೀಶ್,  ವಿನಾಯಕ ಪ್ರಭು, ತಾಲೂಕು ಪಂಚಾಯತ್ ವಲಯ ಮೇಲ್ವಿಚಾರಕ ಕುಶಾಲಪ್ಪ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು