Monday, January 20, 2025
ಸುದ್ದಿ

ಚೀನಾ ರಾಸಾಯನಿಕ ಘಟಕದಲ್ಲಿ ಅಗ್ನಿ ಅವಘಡ: ಭೀಕರ ಸ್ಫೋಟದಲ್ಲಿ 24 ಮಂದಿ ಸಾವು – ಕಹಳೆ ನ್ಯೂಸ್

ಬೀಜಿಂಗ್: ಚೀನಾದಲ್ಲಿ ದುರಂತಗಳ ಸರಮಾಲೆ ಮುಂದುವರಿದಿದೆ. ರಾಸಾಯನಿಕ ಘಟಕದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದ ನಂತರ ಭೀಕರ ಸ್ಫೋಟದಲ್ಲಿ ಕನಿಷ್ಟ 24 ಮಂದಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಈ ದುರಂತದಲ್ಲಿ ಅನೇಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಉತ್ತರ ಚೀನಾದ ಝಾಂಗ್ಜಿಕೌ ನಗರದಲ್ಲಿರುವ ಹೆಬಿ ಷೆನ್ಘುವಾ ಕೆಮಿಕಲ್ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 24 ಮಂದಿ ಸಾವಿಗೀಡಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಕಾರ್ಖಾನೆಯಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ಟ್ರಕ್‍ಗಳು ಹಾಗೂ ಅಪಾರ ಪ್ರಮಾಣದ ರಾಸಾಯನಿಕಗಳು ಬೆಂಕಿಗೆ ಆಹುತಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದುರ್ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸಕ್ರ್ಯೂಟ್‍ನಿಂದಾಗಿ ಉಂಟಾದ ಅಗ್ನಿ ಅವಘಡವೇ ಸ್ಫೋಟಕ್ಕೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.