Recent Posts

Monday, January 20, 2025
ಸುದ್ದಿ

ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾಗೆ ಕನ್ನಡ ರಾಜ್ಯೋತ್ಸವ  ಪ್ರಶಸ್ತಿ – ಕಹಳೆ ನ್ಯೂಸ್

ಮಂಗಳೂರು: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಅವರು ಈ ಸಾಲಿನ ಕನ್ನಡ ರಾಜ್ಯೋತ್ಸವ  ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ನ.29 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕಳೆದ ಹಲವಾರು ವರ್ಷಗಳಿಂದ ಅವರು ಸಾಮಾಜಿಕ, ಆರೋಗ್ಯ, ಶೈಕ್ಷಣಿಕ, ಧಾರ್ಮಿಕ, ರಕ್ತದಾನ ಶಿಬಿರ ಮೊದಲಾದ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯಬ್ಯಾಂಕ್ ಉದ್ಯೋಗಿಯಾಗಿದ್ದ ಇವರು 2001 ರಿಂದ ಸ್ವಯಂ ನಿವೃತ್ತಿ ಪಡೆದುಕೊಂಡು ಸೇವಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ 20 ವರ್ಷಗಳಿಂದ ಉಚಿತವಾಗಿ ಆರೋಗ್ಯ  ತಪಾಸಣ ಶಿಬಿರ, 99 ಬಾರಿ ರಕ್ತದಾನ ಶಿಬಿರ, ಕಣ್ಣಿನ ಚಿಕಿತ್ಸಾ ಶಿಬಿರ, ದಂತ ಚಿಕಿತ್ಸಾ ಶಿಬಿರ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವಿದ್ಯಾರ್ಥಿ ವೇತನ ವಿತರಣೆ, ಜನಶ್ರೀ ವಿಮಾ ಯೋಜನೆಯಡಿ ವಿಮಾ ಸೌಲಭ್ಯಗಳನ್ನು ನೀಡುತ್ತಾ ಬಂದಿದ್ದಾರೆ.

ಕಲೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹದಾತರಾಗಿದ್ದಾರೆ.  ಇವರ ಸೇವಾ ಚಟುವಟಿಕೆಗಳನ್ನು ಗುರುತಿಸಿ ಈಗಾಗಲೇ ಹಲವಾರು ಪ್ರಶಸ್ತಿ ಸನ್ಮಾನಗಳು ಇವರನ್ನು ಅರಸಿಕೊಂಡು ಬಂದಿದೆ. ಇದೀಗ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.