Recent Posts

Monday, January 20, 2025
ಸುದ್ದಿ

ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಬೆಂಕಿಗಾಹುತಿ – ಕಹಳೆ ನ್ಯೂಸ್

ಕಡಬ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ರಾತ್ರಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ತಲೇಕಿ ಬಳಿ ಈ ಘಟನೆ ಸಂಭವಿಸಿದೆ.

ಬೈದ್ರಿಜಾಲು ನಿವಾಸಿ ಸುಂದರ ಎಂಬುವವರು ರಾತ್ರಿ ಕುಟುಂಬಿಕರೊಂದಿಗೆ ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಕಡಬಕ್ಕೆ ತೆರಳುತ್ತಿದ್ದರು. ಈ ವೇಳೆ ತಲೇಕಿ ಬಳಿ ತಲುಪಿದಾಗ ಕಾರಿನ ಎಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಕ್ಷಣವೇ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಎಂಜಿನ್ ಬಳಿ ಸಣ್ಣಗೆ ಬೆಂಕಿ ಹತ್ತಿಕೊಂಡಿರುವುದು ಕಂಡುಬಂದಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾರನ್ನು ವ್ಯಾಪಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಕಾರು ಸಂಪೂರ್ಣ ಭಸ್ಮವಾಗಿದ್ದು, ಕಾರಿನಲ್ಲಿದ್ದವರು ಹೊರಗಡೆ ಇಳಿದುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.