Recent Posts

Sunday, January 19, 2025
ಸುದ್ದಿ

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದ ವಿಶ್ವ ಹಿಂದೂ ಪರಿಷತ್ ದುರ್ಗಾವಾಹಿನಿ – ಕಹಳೆ ನ್ಯೂಸ್

ಮಂಗಳೂರು: ತೋಟ ಬೆಂಗ್ರೆಯಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರದ ಘಟನೆಯನ್ನು ಬಗ್ಗೆ ಶೀಘ್ರ ಹಾಗೂ ನಿಷ್ಪಕ್ಷ ತನಿಖೆ ನಡೆಸುವಂತೆ ಮತ್ತು ತಪ್ಪಿಸ್ಥರ ವಿರುದ್ಧ ಕಠಿಣ ಹಾಗೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ವಿಶ್ವ ಹಿಂದೂ ಪರಿಷತ್ ದುರ್ಗಾವಾಹಿನಿ ಪೊಲೀಸ್ ಕಮಿಷನರ್‍ಗೆ ಒತ್ತಾಯಿಸಿದ್ದಾರೆ. ಇಷ್ಟು ಮಾತ್ರವಲ್ಲ ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.
ಅಂತೆಯೇ ಮಂಗಳೂರಿನಲ್ಲಿ ಇತ್ತೀಚಿಗೆ ಡ್ರಗ್‍ಮಾಫಿಯಾ, ಸೆಕ್ಸ್ ಮಾಫಿಯಾ, ಪಬ್‍ಡ್ಯಾನ್ಸ್ ಬಾರ್‍ಗಳು ಯಾವುದೇ ಎಗ್ಗಿಲ್ಲದೇ ನಡೆಯುತ್ತಿದೆ ಪಬ್, ಡಾನ್ಸ್‍ಬಾರ್‍ಗಳು ತಡ ರಾತ್ರಿಯವರೆಗೆ ತೆರೆದಿದ್ದು ಹದಿಹರೆಯದ ಹಾಗೂ ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನ ಯುವತಿಯರು ತಡರಾತ್ರಿಯವರೆಗೆ ಕುಡಿತ, ಡ್ರಗ್ಸ್‍ಮೋಜು ಮಸ್ತಿಮಾಡಿ ರಾತ್ರಿ ವೇಳೆ ಬೀದಿಗಳಲ್ಲಿ ಓಡಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಇಂತಹ ಕಾನೂನು ಬಾಹಿರ ಕೃತ್ಯಗಳು ಜಾಸ್ತಿಯಾಗುವ ಸಂಭವ ಇದೆ. ಆದುದರಿಂದ ಪೊಲೀಸ್ ಇಲಾಖೆ ಈ ಬಗ್ಗೆ ತಕ್ಷಣ ಕಾನೂನು ಕ್ರಮ ಜರುಗಿಸಿ, ತಡ ರಾತ್ರಿಯವರೆಗೆ ಕಾರ್ಯ ನಿರ್ವಹಿಸುತ್ತಿರುವ ಪಬ್‍ಡಾನ್ಸ್‍ಬಾರ್‍ಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ಒತ್ತಾಯಿಸಿದೆ. ಒಂದು ವೇಳೆ ಕ್ರಮ ಕೈಗೊಂಡಿಲ್ಲ ಎಂದಾದರೆ ಮುಂದಿನ ದಿನಗಳಲ್ಲಿ ಸಂಘಟನೆ ಈ ನಿಟ್ಟಿನಲ್ಲಿ ಉಘ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ದುರ್ಗಾವಾಹಿನಿ ವಿಭಾಗ ಸಂಯೋಜಕಿ ವಿದ್ಯಾಮಲ್ಯ ತಿಳಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು