ಅರ್ಜೆಂಟಿನಾ: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸೌದಿ ಅರೇಬಿಯಾ ದೊರೆಯನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಆಹಾರ ಭದ್ರತೆ, ಬಂಡವಾಳ ಹೂಡಿಕೆ, ತಂತ್ರಜ್ಞಾನ, ನವೀಕೃತ ಇಂಧನ ಕುರಿತಾಗಿ ಮಾತುಕತೆ ನಡೆಸಿದರು ಎನ್ನಲಾಗಿದೆ.
ಸೌದಿ ಅರೇಬಿಯಾದ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಸಂಸ್ಕೃತಿ, ಆರ್ಥಿಕ, ಇಂಧನ ಕ್ಷೇತ್ರದಲ್ಲಿ ಹೂಡಿಕೆ ಹಾಗೂ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಮಾತುಕತೆ ನಡೆಸಲಾಗಿದ್ದು, ಈ ಭೇಟಿ ಫಲಪ್ರದವಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.