Recent Posts

Monday, January 20, 2025
ಸುದ್ದಿ

ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ: ಪ್ರಕಾಶ್ ರೈ – ಕಹಳೆ ನ್ಯೂಸ್

ಮಂಗಳೂರು: ಭಾರಿ ಗೊಂದಲದ ನಡುವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಲ್ಲಿ ಐದನೇ ವರ್ಷದ ಜನನುಡಿ ಸಮಾವೇಶಕ್ಕೆ ಚಾಲನೆ ಸಿಕ್ತು. ಎರಡು ದಿನಗಳ ಕಾಲ ನಡೆಯುವ ಈ ಸಮಾವೇಶವನ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ದೇಶದಲ್ಲಿ ಈಗ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ಯುಗ ಆರಂಭವಾಗಿದೆ. ಸಂಪತ್ತಿನ ಶೇಖರಣೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜನರ ಸಂಪತ್ತಿನ ರಕ್ಷಣೆ ಮಾಡಬೇಕಾದ ಬ್ಯಾಂಕ್‍ಗಳು ಲೂಟಿಕೋರರ ಬೆಂಬಲಕ್ಕೆ ನಿಂತಿವೆ ಎಂದರು. ಇನ್ನು ಅತಿಥಿಯಾಗಿ ಭಾಗವಹಿಸಿದ್ದ ನಟ ಪ್ರಕಾಶ್ ರೈ ಮಾತನಾಡಿ, ಶಬರಿಮಲೆ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮ, ಆಚಾರ, ವಿಚಾರ ವೈಯಕ್ತಿಕವಾದುದು. ಅದನ್ನ ಪ್ರಶ್ನೆ ಮಾಡುವ ಅಧಿಕಾರ ಯಾರಿಗೂ ಇಲ್ಲ. ಇನ್ನು ದೇಶದಲ್ಲಿ ಸುಳ್ಳು ಹೇಳಿ ರಾಜ್ಯಭಾರ ಮಾಡಲಾಗುತ್ತಿದೆ. ಮನುಷ್ಯ ಪ್ರಕೃತಿಯನ್ನ ಕಾಪಾಡುವಷ್ಟು ದೊಡ್ಡವನಲ್ಲ ಎಂದು ನಿಮಿಷಗಳ ಕಾಲ ಭಾಷಣ ಮಾಡಿ ಮುಗಿಸಿದರು.