Recent Posts

Sunday, January 19, 2025
ಸುದ್ದಿ

Breaking News : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಗ್ಯಾಸ್ ಸೋರಿಕೆ ; ಪರಿಸರದಲ್ಲಿ ಬೆಂಕಿ ಬಳಸದಂತೆ ಮುನ್ನೆಚ್ಚರಿಕೆ – ಕಹಳೆ ನ್ಯೂಸ್

ಡಿ.02. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಪಲ್ಟಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ಬಳಿಯ ತೂಗುಸೇತುವೆಯ ತಿರುವಿನಲ್ಲಿ ಶನಿವಾರ ರಾತ್ರಿ ಸಂಭವಿಸಿದ್ದು, ರಸ್ತೆ ತಡೆ ಉಂಟಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಭಾರತ್ ಗ್ಯಾಸ್ ಸಂಸ್ಥೆಗೆ ಸೇರಿದ ಟ್ಯಾಂಕರ್ ಪಲ್ಟಿಯಾಗಿದ್ದು, ಟ್ಯಾಂಕರ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಬೆದ್ರೋಡಿ ಆಸುಪಾಸಿನ ಮತ್ತು ಮೊಗೇರಡ್ಕ ನದಿ ಕಿನಾರೆಯಲ್ಲಿ ವಾಸಿಸುವ ಮನೆಗಳಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕಾ ನೀಡಲಾಗಿದ್ದು, ಸ್ಥಳಕ್ಕೆ ತಜ್ಞ ಅಧಿಕಾರಿಗಳ ತಂಡ ಹಾಗೂ ಅಗ್ನಿಶಾಮಕ ದಳ, ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ. ವಾಹನಗಳು ಬದಲಿ ರಸ್ತೆಯ ಮೂಲಕ ಸಂಚರಿಸುತ್ತಿವೆ.