Recent Posts

Sunday, January 19, 2025
ಸುದ್ದಿ

ಮಹಾರಾಷ್ಟ್ರದಲ್ಲಿ KSRTC ಬಸ್‌ಗಳ ಮೇಲೆ ಬಿತ್ತು ಕಲ್ಲು !

ಕೊಲ್‌ಹಾಪುರ : ಇಲ್ಲಿನ ಕಾಗಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಕಾರ್ಮಿಕರ ಪ್ರತಿಭಟನೆ ತೀವ್ರಗೊಂಡಿರುವ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.

ಘಟನೆಯಿಂದಾಗಿ ಬಸ್‌ಗಳು ಸಂಚಾರ ನಿಲ್ಲಿಸಿದ ಕಾರಣ ಹಲವು ಪ್ರಯಾಣಿಕರು ಪರದಾಡಬೇಕಾಯಿತು, ಖಾಸಗಿ ವಾಹನಗಳನ್ನು ಅವಲಂಬಸಿ ಪ್ರಯಾಣ ಮುಂದುವರಿಸಬೇಕಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳ್ಳಾರಿಯಿಂದ ಪೂನಾಕ್ಕೆ ತೆರಳುತ್ತಿದ್ದ ಬಸ್‌ಗಳನ್ನು ಗುರಿಯಾಗಿರಿಸಿ ಕಲ್ಲು ತೂರಾಟ ನಡೆಸಲಾಗಿದೆ. 15 ಕ್ಕೂ ಹೆಚ್ಚು ಬಸ್‌ಗಳನ್ನು ತಡೆಯಲಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯ ಬಳಿಕ ಮಹಾರಾಷ್ಟ್ರಕ್ಕೆ ತೆರಳುವ ಎಲ್ಲಾ ಸರ್ಕಾರಿ ಬಸ್‌ಗಳ ಸಂಚಾರವನ್ನು ಸ್ಥಗಿತಗೊಳಿಸಿರುವುದಾಗಿ ಕೆಎಸ್‌ಆಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಹಬ್ಬದ ಸಂಭ್ರಮಕ್ಕಾಗಿ ಪ್ರಯಾಣಿಸಲೇಬೇಕಾದ ಜನರಿಗೆ ಇದರಿಂದಾಗಿ ಭಾರಿ ಸಮಸ್ಯೆ ಉಂಟಾಗಿದೆ.

Leave a Response