Monday, January 20, 2025
ಸುದ್ದಿ

ಮರಳು ಸಮಸ್ಯೆ ಬಗೆಹರಿಸಲು ಒತ್ತಾಯಿಸಿ 24 ಗಂಟೆಗಳ ಧರಣಿ ಸತ್ಯಾಗ್ರಹ – ಕಹಳೆ ನ್ಯೂಸ್

ಮಂಗಳೂರು: ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಜನಪರ ಮರಳು ನೀತಿಗಾಗಿ ಆಗ್ರಹಿಸಿ ಧರಣಿ ಸತ್ಯಾಗ್ರಹ ಕರಾವಳಿ ಜಿಲ್ಲೆಗಳಲ್ಲಿ ಭಾದಿಸಿರುವ ಮರಳು ಸಮಸ್ಯೆಯನ್ನು ಬಗೆಹರಿಸಲು ಒತ್ತಾಯಿಸಿ ಹಾಗೂ ಜನಪರ ಮರಳು ನೀತಿಗಾಗಿ ಆಗ್ರಹಿಸಿ ಅಖಿಲ ಸಂಯೋಜಿತ ಕಟ್ಟಡ ಕಾರ್ಮಿಕರ ಸಂಘಟನೆಯ ನೇತ್ರತ್ವದಲ್ಲಿ ನಗರದಲ್ಲಿಂದು ದ.ಕ.ಜಿಲ್ಲಾಧಿಕಾರಿಗಳ ಕಚೇರಿಯೆದುರು 24 ಗಂಟೆಗಳ ನಿರಂತರ ಧರಣಿ ಸತ್ಯಾಗ್ರಹವು ಪ್ರಾರಂಭಗೊಂಡಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಟ್ಟಡ ಕಾರ್ಮಿಕರ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದರು. ಧರಣಿ ಸತ್ಯಾಗ್ರಹದಲ್ಲಿ ಅಖಿಲ ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿ,ಕಟ್ಟಡ ಕಾರ್ಮಿಕರ ಸಂಘಟನೆಯ ಜಿಲ್ಲಾ ಮುಖಂಡರಾದ ಜಯಂತ ನಾಯಕ್,ಸದಾಶಿವದಾಸ್,ರವಿಚಂದ್ರ ಕೊಂಚಾಡಿ, ರಾಮಣ್ಣ ವಿಟ್ಲ,ದಿನೇಶ್ ಶೆಟ್ಟಿ,ವಸಂತಿ ಕುಪ್ಪೆಪದವು,ನಾಗರಾಜ್ ಸುಳ್ಯ,ಶಂಕರ ವಾಲ್ಪಾಡಿ, ಮುಂತಾದವರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು