ಪಾರದರ್ಶಕತೆ ಮತ್ತು ಉತ್ತರದಾಯಿತ್ವ ರೀತಿಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಿಸುತ್ತದೆ: ಎಂ.ಬಿ.ನಾಯಕ್ – ಕಹಳೆ ನ್ಯೂಸ್
ಬಂಟ್ವಾಳ: ಪಾರದರ್ಶಕತೆ ಮತ್ತು ಉತ್ತರದಾಯಿತ್ವ ರೀತಿಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಿಸುತ್ತದೆ ಎಂದು ಜಿ.ಪಂ.ಯೋಜನಾ ನಿರ್ದೇಶಕ ಎಂ.ಬಿ.ನಾಯಕ್ ಹೇಳಿದರು.
ಬಂಟ್ವಾಳ ತಾಲೂಕು ಪಂಚಾಯತ್‌ನ ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ನಡೆದ ತಾಲೂಕು ಪಂಚಾಯತ್‌ನ ಜಮಾಬಂಧಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಿಕ್ಷಣ ಇಲಾಖೆಗಳು ನರೇಗಾದ ಅನುದಾನ ಬಳಸಿಕೊಂಡು ಅಕ್ಷರ ಕೈತೋಟ ಎಲ್ಲಾ ಶಾಲೆಗಳಲ್ಲಿ ನಿರ್ಮಾಣ ಮಾಡಬೇಕು. ಸ್ವಚ್ಚತೆ ಮತ್ತು ಶಾಲೆಯ ಮಕ್ಕಳಿಗೆ ತರಕಾರಿ ಬಳಕೆಯಾಗುವ ನಿಟ್ಟಿನಲ್ಲಿ ಯೋಜನೆ ಜಾರಿಮಾಡಲಾಗಿದೆ, ಎಂದರು.