ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಕೇರಳ ಸರಕಾರ ತುದಿಗಾಲಿನಲ್ಲಿ ನಿಂತಿದೆ. ಸುಪ್ರೀಂಕೋಟ್ ಜಾರಿಗೆ ತಂದ ತೀರ್ಪನ್ನು ವಿರೋಧಿಸಿ ವಿಧಾನಸೌಧದ ಎದುರು ಬಿಜೆಪಿ ಮುಖಂಡರು ನಿನ್ನೆಯಿಂದ ಅನಿರ್ದಿಷ್ಟಾವಧಿ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎನ್. ರಾಧಾಕೃಷ್ಣನ್ ಅವರು ನಿರಶನ ಆರಂಭಿಸಿದ್ದು, ಇದಕ್ಕೆ ಬಿಜೆಪಿ ಸಂಸದೆ ಸರೋಜ್ ಪಾಂಡೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಸಂಸದೆ ಪಾಂಡೆ, ಕೇರಳದ ಸಿಪಿಎಂ ಸರ್ಕಾರ ಜನರ ಆಶೋತ್ತರಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದು, ಈ ಬಗ್ಗೆ ಸಂಸತ್ತಿನಲ್ಲೂ ಪ್ರಸ್ತಾಪಿಸುತ್ತೇವೆ ಎಂದು ಅಂದರು.
ಇದೆ ವೇಳೆ ಕೇರಳದ ಎಲ್ಲ 14 ಜಿಲ್ಲೆಗಳಿಂದ ಬಿಜೆಪಿ ಕಾರ್ಯಕರ್ತರು ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ.