Monday, January 20, 2025
ಸುದ್ದಿ

ಶಿಥಿಲಾವಸ್ಥೆಯಲ್ಲಿರುವ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷರ ಬೇಟಿ – ಕಹಳೆ ನ್ಯೂಸ್

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯಡಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಸಾರ್ವಜನಿಕ ವಿದ್ಯಾರ್ಥಿ ನಿಲಯಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಸಂಬಂಧಿಸಿದ ಇಲಾಖೆಯ ಸಿಬ್ಬಂದಿ ಗಳ ಜೊತೆ ಮಾತನಾಡಿದರು. ಹಳೆಯ ಕಾಲದ ಕಟ್ಟಡ ಮತ್ತು ಬಿರುಕು ಬಿದ್ದಿರುವ ಗೋಡೆಗಳನ್ನು ನೋಡಿ ಶೀಘ್ರವಾಗಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ತಾ.ಪಂ.ನಲ್ಲಿ ನಿರ್ಣಯ ಮಾಡಿ ಸರಕಾರದ ಮುಂದೆ ಕಳುಹಿಸಲಾಗುವುದು ಎಂದು ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಅನೇಕ ಬಾರಿ ಶಿಥಿಲಾವಸ್ಥೆಯಲ್ಲಿರುವ ವಿದ್ಯಾರ್ಥಿ ನಿಲಯದ ಬಗ್ಗೆ ಮಾಧ್ಯಮ ಗಳು ಎಚ್ಚರಿಸಿದ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಇವರು ಬೇಟಿ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿಯ ಅದ್ಯಕ್ಷೆ ಧನಲಕ್ಮೀ ಸಿ ಬಂಗೇರ, ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ತಾ.ಪಂ.ಸದಸ್ಯ , ಹೈದರ್ ಕೈರಂಗಳ ಮತ್ತಿತರರು ಉಪಸ್ಥಿತರಿದ್ದರು.