Tuesday, January 21, 2025
ಸುದ್ದಿ

ರಾಜ್ಯ ಸರ್ಕಾರದಿಂದ ನಾಳೆ ರಾಜ್ಯದ ಪ್ರಮುಖ ನದಿಗಳ ನೀರಿನ ಸದ್ಬಳಕೆ ಹಾಗೂ ಜಲ ವಿವಾದಗಳ ಸಭೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಪ್ರಮುಖ ನದಿಗಳ ನೀರಿನ ಸದ್ಬಳಕೆ ಹಾಗೂ ಜಲ ವಿವಾದಗಳ ಬಗ್ಗೆ ಚರ್ಚಿಸಲು ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ಜಲಸಂಪನ್ಮೂಲ ಸಚಿವರುಗಳ ಸಭೆಯನ್ನು ನಾಳೆ ರಾಜ್ಯ ಸರ್ಕಾರ ನಡೆಸಲಿದೆ.

ಸಭೆಯು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಇತರೆ ಜಲಾನಯನ ಭಾಗದಲ್ಲಿ ನೀರಿನ ಸಮಪರ್ಕ ಬಳಕೆ ಹಾಗೂ ಅಂತರ್ ರಾಜ್ಯ ಜಲ ವಿವಾದಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು