ಬಿಜೆಪಿ ಅಧ್ಯಕ್ಷ ಅಮಿತ್ ಷಾ ಬಿಹಾರ್ನಿಂದ ಇಂದು ಹಮ್ಮಿಕೊಂಡಿರುವ ರಥಯಾತ್ರೆಗೆ ಪಶ್ಚಿಮ ಬಂಗಾಳ ಸರಕಾರ ಅನುಮತಿ ನಿರಾಕರಿಸಿದೆ.
ಕಲ್ಕತ್ತಾ ಹೈಕೋರ್ಟ್ ಕೂಡ ಅನುಮತಿ ನೀಡಿಲ್ಲ. ಈ ಕುರಿತ ವಿಚಾರಣೆಯನ್ನು ಜನವರಿ 9 ಕ್ಕೆ ಮುಂದೂಡಿದ್ದು ಅಲ್ಲಿವರೆಗೂ ರಥಯಾತ್ರೆ ನಡೆಸುವಂತಿಲ್ಲ ಎಂದು ಆದೇಶಿಸಿದೆ.
ಕೋಮು ಸೌರ್ಹದಕ್ಕೆ ಧಕ್ಕೆಯಾಗಬಹುದು ಎಂಬ ಉದ್ದೇಶದಿಂದ ಅನುಮತಿ ನಿರಾಕರಿಸಿದೆ ಎಂದು ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಸ್ಪಷ್ಟಪಡಿಸಿದ್ದಾರೆ.