Friday, September 20, 2024
ಸುದ್ದಿ

ಮಸಾಜ್ ಪಾರ್ಲರ್ ಗೆ ದಾಳಿ: ಮೂವರು ನೊಂದ ಯುವತಿಯರ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು: ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್ ರಾವ್ ರಸ್ತೆಯ ಕಟ್ಟಡವೊಂದರಲ್ಲಿ ಅಕ್ರಮವಾಗಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮೂವರು ನೊಂದ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ.

ಮಂಗಳೂರು ನಗರದ ಕೆ.ಎಸ್ ರಾವ್ ರಸ್ತೆಯಲ್ಲಿರುವ ಕ್ಲಾಸಿಕ್ ಆರ್ಕೆಡ್ ಕಟ್ಟಡದಲ್ಲಿ ದೀಪಂ ಆರ್ಯುವೇಧಿಕ್ ಥೆರಫಿ ಸೆಂಟರ್ ಎಂಬ ಹೆಸರಿನ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ ವೃತ್ತಿಯನ್ನು ನಡೆಸುತ್ತಿದ್ದ ನೊಂದ ಮೂರು ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಸಾಜ್ ಪಾರ್ಲರ್ ನಲ್ಲಿ ಬಾಡಿ ಮಸಾಜ್ ಎಂಬ ಹೆಸರಿನಲ್ಲಿ ಯುವತಿಯರನ್ನು ಗಿರಾಕಿಗಳಿಗೆ ಒದಗಿಸಿ ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದರು. ಈ ಮಸಾಜ್ ಪಾರ್ಲರ್ ನ್ನು ನಡೆಸುತ್ತಿದ್ದ ಆರೋಪಿ ರೋಶನ್ ಎಂಬಾತನು ದಾಳಿ ಸಮಯ ಪರಾರಿಯಾಗಿರುತ್ತಾನೆ.

ಜಾಹೀರಾತು

ಸಿಸಿಬಿ ಘಟಕದ ಇನ್ಸ್ ಪೆಕ್ಟರ್ ಶಾಂತಾರಾಮ, ಉತ್ತರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುರೇಶ್ ಕುಮಾರ್ ಹಾಗೂ ಸಿಸಿಬಿ ಘಟಕದ ಪಿಎಸ್ಐ ಶ್ಯಾಮ್ ಸುಂದರ್, ಹೆಚ್.ಡಿ.ಕಬ್ಬಾಳ್ ರಾಜ್ ಹಾಗೂ ಸಿಸಿಬಿ ಘಟಕದ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.