Friday, September 20, 2024
ಸುದ್ದಿ

BIG BREAKING NEWS ಮೋದಿ ಸರ್ಕಾರಕ್ಕೆ ಐತಿಹಾಸಿಕ ಗೆಲವು: ವಿಜಯ್ ಮಲ್ಯ ಅಂತೂ ಇಂತೂ ಬರ‍್ತಾರ ಭಾರತಕ್ಕೆ? – ಕಹಳೆ ನ್ಯೂಸ್

ಲಂಡನ್: ಭಾರತದ ಬ್ಯಾಂಕ್‌ಗಳಿಗೆ ಸಾಲ ಮರುಪಾವತಿಸದೆ ವಿದೇಶದಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಗಡಿಪಾರು ಕುರಿತು ಲಂಡನ್‌ನ ವೆಸ್ಟ್ ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ಸೋಮವಾರ ತೀರ್ಪು ಪ್ರಕಟ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಲ್ಯ ಗಡಿಪಾರು ಮಾಡುವಂತೆ ಕೋರ್ಟ್ ತೀರ್ಪು ನೀಡಿರುವ ಹಿನ್ನಲೆಯಲ್ಲಿ, ಆದೇಶ ಬ್ರಿಟನ್ ಗೃಹ ಕಾರ್ಯದರ್ಶಿಗೆ ತಲುಪುತ್ತದೆ. ಸರ್ಕಾರದ ಪರವಾಗಿ ಕಾರ್ಯದರ್ಶಿ ಗಡಿಪಾರು ಆದೇಶ ಹೊರಡಿಸಿ ಹಸ್ತಾಂತರ ಪ್ರಕ್ರಿಯೆಗೆ ಚಾಲನೆ ನೀಡುತ್ತಾರೆ. ಗಡಿಪಾರು ಆದೇಶ ಪ್ರಶ್ನಿಸಿ ಮಲ್ಯ ಪರವಾಗಿ ಹೈಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗದಿದ್ದರೆ ಮತ್ತು ಗೃಹ ಕಾರ್ಯದರ್ಶಿ ಕೂಡ ಗಡಿಪಾರು ಆದೇಶ ಹೊರಡಿಸಿದ ೨೮ ದಿನಗಳ ಒಳಗೆ ಮಲ್ಯ ಬ್ರಿಟನ್ ತೊರೆಯಬೇಕಾಗಿದೆ. ಸಾಲ ಮರುಪಾವತಿ ಮಾಡದೆ ಬ್ರಿಟನ್‌ನಲ್ಲಿ ಮಲ್ಯ ತಲೆಮರೆಸಿಕೊಂಡಿದ್ದರು. ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತದ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಮನವಿ ಲಂಡನ್‌ನ ವೆಸ್ಟ್ ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಇನ್ನು ತೀರ್ಪು ಪ್ರಕಟವಾಗುತ್ತಿದ್ದ ಹಾಗೇ ಗಡಿಪಾರು ಪ್ರಶ್ನಿಸಿ ನ್ಯಾಯಾಲಯದ ತೀರ್ಪುನ್ನು ಪ್ರಶ್ನಿಸಿ ಲಂಡನ್ ಹೈ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ಜಾಹೀರಾತು