Recent Posts

Sunday, January 19, 2025
ಸುದ್ದಿ

7 ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ ಮಂಗಳೂರು ಪೊಲೀಸರು: ಇಬ್ಬರು ಸರಗಳ್ಳರ ಬಂಧನ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ಸರಗಳ್ಳತನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿದ ಮಂಗಳೂರು ನಗರದ ಕೇಂದ್ರ ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಕಾರ್ಯಾಚರಣೆ ನಡೆಸಿ 07 ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದು, ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ದೇರಳಕಟ್ಟೆ ನಿವಾಸಿ ಹರೀಶ್ ಎಸ್ ನಾಥ್(45), ಕಂಕನಾಡಿ ನಿವಾಸಿ ರಾಜೇಶ್(45) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧಿತ ಆರೋಪಿಗಳಿಂದ 3,64 ಲಕ್ಷ ರೂಪಾಯಿ ಮೌಲ್ಯದ ಒಟ್ಟು 126.960 ಗ್ರಾಂ ಚಿನ್ನದ ಆಭರಣಗಳು ಮತ್ತು ಆಕ್ಟಿವಾ ಸ್ಕೂಟರ್ ಸಮೇತ ಒಟ್ಟು 3,74 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆಯರ ಕತ್ತಿನಲ್ಲಿದ್ದ ಚಿನ್ನದ ಸರಗಳನ್ನು ಆಕ್ಟೀವಾ ಸ್ಕೂಟರ್ ನಲ್ಲಿ ಬರುವ ಇಬ್ಬರು ಸುಲಿಗೆ ಮಾಡಿಕೊಂಡು ಹೋದ ಬಗ್ಗೆ ಉರ್ವ ಪೊಲೀಸ್ ಠಾಣೆ ಯಲ್ಲಿ 1 ಪ್ರಕರಣ, ಬರ್ಕೆ ಪೊಲೀಸ್ ಠಾಣೆಯಲ್ಲಿ 2. ಪ್ರಕರಣ, ಕದ್ರಿ ಪೊಲೀಸ್ ಠಾಣೆಯಲ್ಲಿ 1ಪ್ರಕರಣ, ಕಾವೂರು ಠಾಣೆಯಲ್ಲಿ 1 ಪ್ರಕರಣ ಮತ್ತು ದಕ್ಷಿಣ ಠಾಣೆಯಲ್ಲಿ 2 ಸುಲಿಗೆ ಯತ್ನ ಪ್ರಕರಣಗಳು ದಾಖಲಾಗಿತ್ತು.