Monday, January 20, 2025
ಸುದ್ದಿ

ಪಂಚರಾಜ್ಯ ಚುನಾವಣೆ ಫಲಿತಾಂಶ: ರಾಜಸ್ಥಾನದಲ್ಲಿ ಕಾಂಗ್ರೆಸ್ಸಿಗೆ ಬಹುಮತ – ಕಹಳೆ ನ್ಯೂಸ್

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದ್ದು, ಕುತೂಹಲ ಕೆರಳಿಸಿದೆ. ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಛತ್ತೀಸ್ ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ಈ ಐದು ರಾಜ್ಯಗಳಲ್ಲಿ ಚುನಾವಣೆ ನಡೆದಿತ್ತು.

ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ ಒಂದೋ ಅಧಿಕಾರ ಕಳೆದುಕೊಳ್ಳಲಿದೆ ಅಥವಾ ಅತಂತ್ರ ವಿಧಾನಸಭೆ ತಲೆದೋರಲಿದೆ ಎಂದಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಟಿಆರ್ ಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತ ಎಂದು ಸಮೀಕ್ಷೆಗಳು ಹೇಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಿಜೋರಾಂನಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಬಹುದು ಮತ್ತ ಛತ್ತೀಸ್ ಗಢದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಹುದು ಎಂದು ಸಮೀಕ್ಷೆಗಳು ಹೇಳಿವೆ. ಆದರೆ ಈ ಎಲ್ಲ ಸಮೀಕ್ಷೆಗಳಲ್ಲಿ ಎಷ್ಟು ಸತ್ಯವಾಗಲಿವೆ ಎಂಬುದನ್ನು ಕಾದುನೋಡಬೇಕಿದೆ.