ಮಂಗಳೂರು: ನಗರದಲ್ಲಿ ಕಳೆದ ೧೫ ದಿನಗಳಿಂದ ನಿರಂತರವಾಗಿ ಬೀದಿ ಬದಿ ವ್ಯಾಪಾರಸ್ಥರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮತ್ತು ಕೂಡಲೇ ಟೌನ್ ವೆಂಡಿಂಗ್ ಕಮಿಟಿ ಸಭೆ ನಡೆಸಲು ಒತ್ತಾಯಿಸಿ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಯಿತು.
ನಗರದ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯಿಂದ ಮೆರವಣಿಗೆ ನಡೆಸಲಾಯಿತು. ಬೀದಿ ವ್ಯಾಪಾರಸ್ಥರು ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ನೇಣು ಹಗ್ಗ ಪ್ರದರ್ಶಿಸಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.
ಈ ಸಂದರ್ಭ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಮುಹಮ್ಮದ್ ಮುಸ್ತಫಾ, ಹರೀಶ್ ಮತ್ತಿತರರು ಪಾಲ್ಗೊಂಡಿದ್ದರು.