Thursday, September 19, 2024
ಸುದ್ದಿ

ಪಂಚರಾಜ್ಯಗಳಲ್ಲಿ ಜನತೆಯ ತೀರ್ಪನ್ನು ಸ್ವೀಕರಿಸುತ್ತೇನೆ: ಮೋದಿ ಟ್ವೀಟ್ – ಕಹಳೆ ನ್ಯೂಸ್

ಹೊಸದಿಲ್ಲಿ: “ಜನರ ತೀರ್ಪನ್ನು ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. ಜನರ ಕಲ್ಯಾಣಕ್ಕಾಗಿ ಈ ರಾಜ್ಯಗಳ ಬಿಜೆಪಿ ಸರ್ಕಾರಗಳು ಅವಿರತವಾಗಿ ಶ್ರಮಿಸಿದ್ದವು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಸೋಲು ಹಾಗೂ ಗೆಲುವು ಜೀವನದ ಅವಿಭಾಜ್ಯ ಅಂಗ. ಪಂಚರಾಜ್ಯಗಳಲ್ಲಿ ಜನತೆಯ ತೀರ್ಪನ್ನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿರುವ ಅವರು, “ಜಯ ಸಾಧಿಸಿದ್ದಕ್ಕಾಗಿ ಕಾಂಗ್ರೆಸ್‌ಗೆ ಅಭಿನಂದನೆಗಳು. ತೆಲಂಗಾಣದಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರ ಹಿಡಿದ ಕೆಸಿಆರ್, ಮೀಜೋರಾಂನಲ್ಲಿ ಅದ್ಭುತ ಜಯ ಸಾಧಿಸಿದ ಎಂಎನ್‌ಎಫ್‌ಗೂ ಅಭಿನಂದನೆಗಳು” ಎಂದು ಹೇಳಿದ್ದಾರೆ.

ಜಾಹೀರಾತು

ಬಿಜೆಪಿ ಕಾರ್ಯಕರ್ತರ ಕುಟುಂಬಗಳು ಈ ರಾಜ್ಯಗಳಲ್ಲಿ ಹಗಲು ರಾತ್ರಿ ಶ್ರಮಿಸಿವೆ. ಅವರ ಕಠಿಣ ಪರಿಶ್ರಮಕ್ಕೆ ನಾನು ಸೆಲ್ಯೂಟ್ ಹೇಳುತ್ತೇನೆ.

ಮಂಗಳವಾರದ ಫಲಿತಾಂಶ, ಜನರಿಗೆ ಸೇವೆ ಮಾಡುವ ಪಕ್ಷದ ತತ್ವವನ್ನು ಮತ್ತಷ್ಟು ಬಲಗೊಳಿಸಲಿದೆ ಮತ್ತು ಭಾರತದ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲು ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.