Monday, January 20, 2025
ರಾಜಕೀಯಸುದ್ದಿ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ: 2019 ರ ಲೋಕಸಭೆ ಚುನಾವಣೆಗೆ ಯಾವುದೇ ಪ್ರಭಾವ ಬೀರದು: ಅರುಣ್ ಜೇಟ್ಲಿ – ಕಹಳೆ ನ್ಯೂಸ್

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಕಹಿಯನ್ನು ಅನುಭವಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರೋ ಈ ಎಲೆಕ್ಷನ್ ರಣರಂಗ ಈ ಫಲಿತಾಂಶ ಲೋಕಸಭೆ ಚುನಾವಣೆಗೆ ಪರಿಣಾಮ ಬೀರಲಿದೆ ಎಂಬ ಮಾತು ಕೇಳಿಬರುತ್ತಿದ್ದಂತೆ ಅದನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿ ಹಾಕಿದ್ದಾರೆ.

2019 ರ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪ್ರಭಾವ ಬೀರದು. ಕೇಂದ್ರ ಸರ್ಕಾರದ ಕಾರ್ಯ ಆಧರಿಸಿಯೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಚುನಾವಣೆಯ ವಿಚಾರಗಳೇ ಬೇರೆ. ಇದೇ ಮೂರು ರಾಜ್ಯಗಳಲ್ಲಿ 2003 ರಲ್ಲಿ ನಡೆದ ಚುನಾವಣೆಯಲ್ಲಿ ನಾವು ಗೆಲುವು ಸಾಧಿಸಿದ್ದೆವು. 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲು ಕಂಡಿದ್ದೆವು ಎಂದು ವಿಶ್ಲೇಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

2019 ರ ಚುನಾವಣೆಯು ಈ ಫಲಿತಾಂಶದ ಮೇಲೆ ಆಧಾರಿತವಾಗಿಲ್ಲ. ಅದೇನಿದ್ದರೂ ಕೇಂದ್ರ ಸರ್ಕಾರದ ಕಾರ್ಯಗಳು ಹಾಗೂ ಪ್ರಧಾನಿ ಮೋದಿ ಅವರ ನಾಯಕತ್ವ ಆಧರಿಸಿ ನಿರ್ಧಾರವಾಗಲಿದೆ. ಆದರೂ ಮುಂದಿನ ಚುಣಾವಣೆಯಲ್ಲಿ ನಾವು ಸಾಕಷ್ಟು ಶ್ರಮ ವಹಿಸಬೇಕಿದೆ ಎಂದು ಹೇಳಿದ್ದಾರೆ.