ಬೆಳ್ತಂಗಡಿ: ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ತುಳು ಭಾಷೆಯ ಬಗ್ಗೆ ತುಳು ನೆಲದಲ್ಲಿಯೇ ಹೋರಾಟ ಮಾಡಬೇಕಾದ ಸನ್ನಿವೇಶ ಎದುರಾಗಿದೆ ಎಂದು ಸಾಹಿತಿ ಉದಯ ಧರ್ಮಸ್ಥಳ ವಿಷಾದಿಸಿದರು.
ಅವರು ಬುಧವಾರ ಬೆಳ್ತಂಗಡಿ ಮಿನಿ ವಿಧಾನಸೌಧದ ಆವರಣದಲ್ಲಿ ತುಳುನಾಡ್ ಒಕ್ಕೂಟದ ವತಿಯಿಂದ ತುಳು ಭಾಷೆಯನ್ನು ದೇಶದ ಸಂವಿದಾನದ ೮ನೇ ಪರಿಚ್ಛೇದಕ್ಕೆ ಸೇರಿಸಬೇಕು, ಕರ್ನಾಟಕ ರಾಜ್ಯದಲ್ಲಿ ಹಾಗೂ ಕೇರಳ ರಾಜ್ಯದಲ್ಲಿ ಆಡಳಿತ ಭಾಷೆಯಲ್ಲಿ ತುಳು ಭಾಷೆಯೂ ಒಂದು ಎಂದು ಪರಿಗಣಿಸಬೇಕು ಎಂಬ ಬೇಡಿಕೆಯನ್ನಿಟ್ಟುಕೊಂಡು ನಡೆಸುತ್ತಿದ್ದ ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.