Tuesday, January 21, 2025
ಸುದ್ದಿ

2 ನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಚಂದ್ರಶೇಖರ್ ರಾವ್ – ಕಹಳೆ ನ್ಯೂಸ್

 

ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕೆ. ಚಂದ್ರಶೇಖರ್ ರಾವ್ ಅವರು ಇಂದು ಎರಡನೇ ಬಾರಿ ತೆಲಂಗಾಣ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಮಧ್ಯಾಹ್ನ 1.30 ಕ್ಕೆ ರಾಜಭವನದಲ್ಲಿ ನಡೆಯುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೆಸಿಆರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಜೊತೆ ಮತ್ತಿಬ್ಬರು ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಟಿಆರ್‌ಎಸ್ ಕೇಂದ್ರ ಕಚೇರಿ ತೆಲಂಗಾಣ ಭವನದಲ್ಲಿ ನಿನ್ನೆ ಕೆಸಿಆರ್ ಶಾಸಕಾಂಗದ ಪಕ್ಷದ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.

ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಅವರನ್ನು ಭೇಟಿಯಾದ ಕೆಸಿಆರ್ ಅವರ ಹಳೆಯ ಸಚಿವ ಸಂಪುಟ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಈ ವೇಳೆ ಗುರುವಾರ ಹೊಸ ಸರ್ಕಾರ ರಚನೆಯಾಗುವವರೆಗೂ ಕೆಸಿಆರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ರಾಜ್ಯಪಾಲರು ತಿಳಿಸಿದ್ರು.