Tuesday, January 21, 2025
ಸುದ್ದಿ

ಫ್ರಾನ್ಸ್ ದೇಶದಂತೆ ಕಸದಿಂದ ವಿದ್ಯುತ್ ತಂತ್ರಜ್ಞಾನ ಅಳವಡಿಸಲು ಸರ್ಕಾರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಸ ವಿಲೇವಾರಿ ಸಮಸ್ಯೆ ನಿವಾರಣೆಗಾಗಿ ಫ್ರಾನ್ಸ್ ದೇಶದ ಮಾದರಿಯಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ತಂತ್ರಜ್ಞಾನ ಅಳವಡಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಮತ್ತು ಬೃಹತ್ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಹೊತ್ತ ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್ ಅವರು ರಾಜ್ಯ ವಿಧಾನ ಸಭೆಯಲ್ಲಿ ಬುಧವಾರ ಪ್ರಕಟಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್. ಟಿ ಸೋಮಶೇಖರ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು ಫ್ರಾನ್ಸ್ ದೇಶ ಕಸದಿಂದ ವಿದ್ಯುತ್ ಉತ್ಪಾದಿಸುವ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಯಶವಂತಪುರ ವಿಧಾನಸಭಾ ಕ್ಷೇತ್ರ ಒಳಗೊಂಡಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ ಮಾದರಿಯಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ಸ್ಥಾಪಿಸಿದಲ್ಲಿ ಕಸ ಸಂಗ್ರಹಣೆ ಹಾಗೂ ವಿಲೇವಾರಿ ಸಮಸ್ಯೆಗೆ ಶಾಶ್ವತವಾದ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು