Monday, January 20, 2025
ಸುದ್ದಿ

ಸೇನೆಯ ದಾಳಿಗೆ ಇಬ್ಬರು ಉಗ್ರರು ಸಾವು: ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್’ಕೌಂಟರ್ ನಡೆಸಿದ್ದು, ಸೇನೆಯ ದಾಳಿಗೆ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

ಬಾರಾಮುಲ್ಲಾದ ಸೊಪೋರ್’ ನ ಬರತ್ಕಲನ್-ಗುಂಡ್ ಮೊಹಲ್ಲಾದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಬದಲಾಯಿಸಿದ ಯೋಧರು, ಸ್ಥಳವನ್ನು ಸುತ್ತುವರೆದು ಉಗ್ರರ ದಾಳಿಗೆ ದಿಟ್ಟ ಉತ್ತರ ನೀಡಿದ್ದಾರೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.