Friday, September 20, 2024
ಸುದ್ದಿ

ರಫೇಲ್ ಡೀಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೇಲಿನ ಸಂಕಟ ನಿವಾರಣೆ – ಕಹಳೆ ನ್ಯೂಸ್

ದೆಹಲಿ: ವಿವಾದಾತ್ಮಕ ರಫೇಲ್ ಒಪ್ಪಂದ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.  ರಫೇಲ್ ಒಪ್ಪಂದವನ್ನು ಪ್ರಶ್ನಿಸಿ ಮೂರು ಅರ್ಜಿಗಳು ಸಲ್ಲಿಕೆಯಾಗಿದ್ದು, ಇದರ ಬಳಿಕ ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ಪ್ರಶಾಂತ್ ಭೂಷಣ್ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

ಈ ಒಪ್ಪಂದವನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಂಡಿದ್ದ ಕೇಂದ್ರ ಸರ್ಕಾರ, ಸಾರ್ವಜನಿಕವಾಗಿ ಒಪ್ಪಂದದ ಮೊತ್ತವನ್ನು ಬಹಿರಂಗಪಡಿಸದಿರಲು ತೀರ್ಮಾನಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯಾಲಯದ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆಗೆ ಒಳಪಡಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಫೇಲ್ ಡೀಲ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಮೇಲಿನ ಸಂಕಟ ನಿವಾರಣೆಯಾಗಿದೆ.

ಜಾಹೀರಾತು

ರಫೇಲ್ ಡೀಲ್ ಪ್ರಕರಣದ ವಿಚಾರವಾಗಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ‘ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ವಿಮಾನ ಖರೀದಿ ಒಪ್ಪಂದ ಹಾಗೂ ಖರೀದಿ ಪ್ರಕ್ರಿಯೆ ಕುರಿತಾಗಿ ಯಾವುದೇ ಅನುಮಾನಗಳಿಲ್ಲ’ ಎಂದು ಸ್ಪಷ್ಟಪಡಿಸಿದೆ.