Monday, January 20, 2025
ಸುದ್ದಿ

ಆಂಧ್ರಪ್ರದೇಶಕ್ಕೆ ಭಾರಿ ಚಂಡಮಾರುತ ಪೆಥಾಯ್: ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಆಂಧ್ರಪ್ರದೇಶ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಮುಂದಿನ 6 ಗಂಟೆಗಳಲ್ಲಿ ಆಂಧ್ರಪ್ರದೇಶಕ್ಕೆ ಭಾರಿ ಚಂಡಮಾರುತ ಪೆಥಾಯ್ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಉತ್ತರ ಭಾಗದಿಂದ ವಾಯುವ್ಯ ಭಾಗಕ್ಕೆ ಬಿರುಗಾಳಿ ಬೀಸುತ್ತಿದೆ.ಆಂಧ್ರಪ್ರದೇಶದ ಕರಾವಳಿಯಲ್ಲಿರುವ ಕಾಕಿನಾಡಕ್ಕೆ ಸೋಮವಾರ ಮಧ್ಯಾಹ್ನದ ವೇಳೆಗೆ ತಲುಪಲಿದೆ. ಭಾರಿ ಮಳೆಯಾಗುವ ನಿರೀಕ್ಷೆಯೂ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಂಧ್ರದ ಕರಾವಳಿ ಜಿಲ್ಲೆಗಳಲ್ಲೂ ಮುಖ್ಯವಾಗಿ ಕೃಷ್ಣ ಜಿಲ್ಲೆಯಲ್ಲಿ ಭಾನುವಾರ ಮಳೆಯಾಗಿದ್ದು, ವಿಪರೀತ ಗಾಳಿ ಬೀಸುತ್ತಿದೆ. ಸಮುದ್ರದ ಮಟ್ಟವೂ ಹೆಚ್ಚಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ದಳ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗೆ ರಕ್ಷಣಾ ಕಾರ್ಯಾಚರಣೆಗೆ ಸಿದ್ಧರಾಗಿರುವಂತೆ ಸೂಚಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಂಡಮಾರುತದಿಂದ ಆಂಧ್ರಪ್ರದೇಶದ ಕರಾವಳಿ ಭಾಗ ಹಾಗೂ ತಮಿಳುನಾಡಿನ ಉತ್ತರ ಭಾಗ ಹಾಗೂ ಕರ್ನಾಟಕದ ಉತ್ತರ ಭಾಗದಲ್ಲಿ ಮಳೆ ಆಗುತ್ತದೆ ಎಂದು ಹೇಳಲಾಗಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಕರಾವಳಿಯತ್ತ ರಭಸವಾಗಿ ದಾವಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.